ಜಿಲ್ಲೆ

ಸಮಾನತೆಯ ಹಾದಿಯಲ್ಲಿ ನಡೆಯೋಣ

ಮಂಜುನಾಥ

ಹೊಸಪೇಟೆ: ದಲಿತ ಪದ್ಧತಿ, ಜೀತ ಪದ್ಧತಿಗಳಂತ ಸಾಮಾಜಿಕ ಪಿಡುಗುಗಳನ್ನು ತೋಡಗಿಸಿ ಸಮಾನತೆಯ ಹಾದಿಯಲ್ಲಿ ನಡೆಯೋಣ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ರಾಜ್ಯ ಕಂಡ ಧೀಮಂತ ನಾಯಕ. ದೇಶಕ್ಕೆ ಡಾ.ಬಿ.ಆರ್.ಆಂಬೆಡ್ಕರ್ ಇದ್ದರೆ ರಾಜ್ಯಕ್ಕೆ ಡಿ.ದೇವರಾಜ ಅರಸು ಅವರ ಕಿರ್ತಿಯಿದೆ. ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ ಅವರು ಎರಡು ಬಾರಿ ಮುಖ್ಯ ಮಂತ್ರಿಗಳಾಗಿ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಚಳುವಳಿಗಳ ಮೂಲಕ ಸಾಮಾಜದಲ್ಲಿನ ದಲಿತ ಪದ್ಧತಿ, ಜೀತ ಪದ್ಧತಿಗಳನ್ನು ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಇಂತಹ ಮಹಾನ್ ವ್ಯಕ್ತಿಗಳ ಹಾದಿಯಲ್ಲೆ ನಾವೆಲ್ಲ ನಡೆಯೋಣ ಎಂದರು.

ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಆಧ್ಯಕ್ಷ ವೈ.ಯಮುನೇಶ ಮಾತನಾಡಿ, ಸಮಾಜದ ಏಳಿಗೆಗೆ ಅಪಾರ ಕಾಳಜಿ ಹೊಂದಿದ್ದ ರಾಜ್ಯದ ಮುಖ್ಯ ಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ, ತುಳಿತಕ್ಕೊಳಗಾದ ಜಾತಿಗಳು ಮತ್ತು ಹಿಂದುಳಿದ ವರ್ಗಗಳನ್ನು ಗುರಿಯಾಗಿಸಿಕೊಂಡು ಅವರ ಸುಧಾರಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರು ಎಂದರು. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಜಿ.ಪಂ. ಉಪ ಕಾರ್ಯದಶಿ ಭೀಮಪ್ಪ ಲಾಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಇತರರಿದ್ದರು.