ಜಿಲ್ಲೆ

ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ

ಮಂಜುನಾಥ

ಹೊಸಪೇಟೆ: ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ತಿಳಿಸಿದ್ದಾರೆ.

ಮಹಾತ್ಮ ಗಾಂಧೀಜಿಯರ ಬದುಕು, ಸ್ವಾತಂತ್ರö್ಯ ಚಳುವಳಿ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳ ಇತ್ಯಾದಿ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಸ್ನಾತಕೋತ್ತರ-ಪದವಿ ವಿಭಾಗದಲ್ಲಿ ವಿಜಯನಗರ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿತ್ತು.

ಸ್ಪರ್ಧೆಯ ವಿಜೇತರಿಗೆ ಅ.10ರಂದು ನಡೆಯುವ ಮಹಾತ್ಮ ಗಾಂಧೀಜಿ ಜಯಂತಿಯ ವಿಶೇಷ ಕಾರ್ಯಕ್ರಮದಲ್ಲಿ ನಗದು ಹಾಗೂ ಬಹುಮಾನ ವಿತರಿಸಲಾಗುತ್ತದೆ.

ಪ್ರೌಢಶಾಲೆ ವಿಭಾಗ:

ಕೊಟ್ಟೂರು ತಾಲೂಕಿನ ಕಂದಗಲ್‌ನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಭರತ್ ಕುಮಾರ್ (ಪ್ರಥಮ), ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಚ್.ವೀಣಾ (ದ್ವಿತೀಯ), ಹರಪ್ಪನಹಳ್ಳಿ ತಾಲೂಕಿನ ಹಗರಿಗಜಾಪುರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಉಷಾ (ತೃತೀಯ) ಸ್ಥಾನ ಪಡೆದಿದ್ದಾರೆ.

ಪಿಯುಸಿ ವಿಭಾಗ:

ಕೊಟ್ಟೂರಿನ ಎಸ್.ಜಿ.ಎಸ್ ಸರ್ಕಾರಿ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಎಂ.ಭವಾನಿ (ಪ್ರಥಮ), ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ವಿ.ಕೆ.ಕೆ. ಸರ್ಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ರಿಯಾನಾ ಪಿಂಜಾರ (ದ್ವಿತೀಯ), ಮರಿಯಮ್ಮನಹಳ್ಳಿಯ ಸರ್ಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ (ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿ-ಸ್ನಾತಕೋತ್ತರ ವಿಭಾಗ:

ಕನ್ನಡ ವಿವಿಯ ವಿದ್ಯಾರ್ಥಿ ಪ್ರವೀಣ್ ನಿಂಗಪ್ಪ ಕಿತ್ತೂರು (ಪ್ರಥಮ), ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಬಿ.ಕಲ್ಪನಾ (ದ್ವೀತಿಯ), ಕನ್ನಡ ವಿವಿಯ ವಿದ್ಯಾರ್ಥಿ ಶೀತಲ್ ಬೇಕ್ಟಾಡಕರ್ (ತೃತೀಯ) ಸ್ಥಾನ ಪಡೆದಿದ್ದಾರೆ.