ಹೊಸಪೇಟೆ: ಪ್ರವಾಹ ಉಂಟಾಗುವ ಸಾಧ್ಯತೆ ಇರುವ ನದಿಪಾತ್ರದ ಒಟ್ಟು 22 ಗ್ರಾಮಗಳಲ್ಲಿ ನೋಡಲ್ ಅಧಿಕಾರಿಗಳನ್ನು ಈಗಾಗಲೇ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೇಶ್ವಾನ್ ಹಾಲನಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಮತ್ತು ಪ್ರವಾಹ ಸನ್ನದ್ಧತೆ ಕುರಿತು ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಮಳೆಗಾಲ ಮುಗಿಯುವವರೆಗೂ ಸಾರ್ವಜನಿಕರಿಗೆ ತೊಂದರೆಯಾಗದAತೆ ಮಳೆಗಾಲವನ್ನು ಸಮರ್ಥವಾಗಿ ಎದುರಿಸಲು ಪೂರ್ವಸಿದ್ದತೆಯನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ತುಂಗಾಭದ್ರ ಜಲಾಶಯದಲ್ಲಿ 3 ಲಕ್ಷ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಿದಲ್ಲಿ ಮಾತ್ರ ವಿಜಯನಗರ ಜಿಲ್ಲೆಯ ನದಿ ಪಾತ್ರದ 22 ಗ್ರಾಮಗಳಲ್ಲಿ ಪ್ರವಾಹ ಉಂಟಾಗುತ್ತದೆ. ಆದ್ದರಿಂದ ಈಗಾಗಲೇ ನೇಮಕ ಮಾಡಲಾಗಿರುವ ನೋಡಲ್ ಅಧಿಕಾರಿಗಳು ತಮಗೆ ನಿಯೋಜಿಸಲಾದ ಗ್ರಾಮಗಳಿಗೆ ಪ್ರತಿ ವಾರ ಭೇಟಿ ಅನುಪಾಲನಾ ವರದಿ 3 ದಿನಗಳೊಳಗೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ತಹಸೀಲ್ದಾರರ ಕಚೇರಿಯಲ್ಲಿ ಸಹಾಯವಾಣಿಯನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಬೆಳೆ ಹಾನಿಯಾದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಬೇಕು. ಮಳೆಗಾಲ ಇರುವುದರಿಂದ ಕುಡಿವ ನೀರಿನ ಟ್ಯಾಂಕರ್ ಹಾಗೂ ಇನ್ನಿತರೆ ಮೂಲಗಳನ್ನು ಸುವ್ಯವಸ್ಥಿತ ರೀತಿಯಲ್ಲಿ ಸ್ವಚ್ಚಗೊಳಿಸಬೇಕು ಎಂದರು.
ಜಿ.ಪಂ. ಮೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಶಾ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಇತರರಿದ್ದರು.