ಹೊಸಪೇಟೆ: ಯುವಜನೋತ್ಸವ ನಿಮಿತ್ತ ನ್ಯಾಕೋ ಮಾರ್ಗ ಸೂಚಿಯಂತೆ ಕಾಲೇಜು ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಸ್ಪರ್ಧೆ ವಿಜಯನಗರ ಕಾಲೇಜಿನಲ್ಲಿ ಸೆ.29ರಂದು ಬೆಳಗ್ಗೆ 6.30ಕ್ಕೆ ಅಯೋಜಿಸಲಾಗಿದೆ.
ರಾಜ್ಯಾದ್ಯಂತ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಎಚ್.ಐ.ವಿ, ಏಡ್ಸ್ ಬಗ್ಗೆ ಅರಿವು ಮೂಡಿಸಲು 5 ಕಿಲೋ ಮೀಟರ್ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದ್ದು, ಅದರಂತೆ ವಿಜಯನಗರ ಜಿಲ್ಲೆಯಲ್ಲಿಯೂ ಸಹ ಮ್ಯಾರಥಾನ್ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೋಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.