ಹೊಸಪೇಟೆಯಲ್ಲಿ ಮಂಗಳವಾರ ವಿದ್ಯಾರ್ಥಿ ನಿಲಯ ಮಂಜೂರಾತಿಗಾಗಿ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿಯ ಸ್ಥಳೀಯರಿಂದ ಸಮಾಜಕಲ್ಯಾಣ ಇಲಾಖೆಯ ಡಿಡಿ ಮಂಜುನಾಥಗೆ ಮನವಿ ಸಲ್ಲಿಸಲಾಯಿತು.  
ಜಿಲ್ಲೆ

ವಸತಿ ನಿಲಯ ಮಂಜೂರು ಮಾಡಿ

ಮಂಜುನಾಥ

ಹೊಸಪೇಟೆ: ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ (ಪ.ಜಾ/ ಪ.ಪಂ.) ಮಂಜೂರಾತಿಗಾಗಿ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿಯ ಜಿ.ಪಂ. ಮಾಜಿ ಸದಸ್ಯ ಅಕ್ಕಿ ಕೊಟ್ರೇಶ್ ನೇತೃತ್ವದಲ್ಲಿ ಸ್ಥಳೀಯರು ಸಮಾಜಕಲ್ಯಾಣ ಇಲಾಖೆಯ ಡಿಡಿ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.

ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿ ಕೇಂದ್ರವಾಗಿದ್ದು, ಶೈಕ್ಷಣಿಕವಾಗಿ ತಾಲೂಕಿನಲ್ಲಿನ ಉತ್ತಮ ಪ್ರಥಮವಾಗಿದೆ. ತಂಬ್ರಹಳ್ಳಿಯ ಸುತ್ತಲಿನ ಅಂದಾಜು 25 ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಗಳ ಜನಸಂಖ್ಯೆ ಹೆಚ್ಚಾಗಿದ್ದು ಅನೇಕ ವಿದ್ಯಾರ್ಥಿಗಳು ತಂಬ್ರಹಳ್ಳಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸುಮಾರು 200 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ.ಜಾತಿ ಹಾಗೂ ಪ.ಪಂಗಡಗಳ ವಿದ್ಯಾರ್ಥಿಗಳು ತಂಬ್ರಹಳ್ಳಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಇಲ್ಲದೇ ಇರುವುದರಿಂದ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೇರೆಡೆ ತೆರಳದೇ ವಿದ್ಯಾಭ್ಯಾಸ ಮೊಟಕುಗೊಳಿಸುತ್ತಿದ್ದಾರೆ. ತಂಬ್ರಹಳ್ಳಿಯಲ್ಲಿ 26 ವರ್ಷಗಳಿಂದ ಪದವಿ ಪೂರ್ವ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದರಿಂದ ಇಲ್ಲಿಯೇ ತಮ್ಮ ವಿದ್ಯಾಭ್ಯಾಸ ಮುಂದುವರಿಸಲು ತಂಬ್ರಹಳ್ಳಿಯಲ್ಲಿ ಹೊಸದಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಪ.ಜಾತಿ ಹಾಗೂ ಪ.ಪಂಗಡ ಬಾಲಕರ ವಿದ್ಯಾರ್ಥಿ ನಿಲಯ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ವಕೀಲ ಹುಡೇದ ಗುರುಬಸವರಾಜ, ಪ್ರಮುಖರಾದ ದೇವೇಂದ್ರ, ವೆಂಕೋಬಪ್ಪ ಇತರರಿದ್ದರು