ಹೊಸಪೇಟೆ: ನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯಕ್ಕೆ ತಹಸೀಲ್ದಾರ್ ಶೃತಿ ಎಂ.ಮಳ್ಳನಗೌಡ್ರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತವಾಗಿ ಇರಬೇಕಾದ ಸೌಕರ್ಯಗಳು, ಆಹಾರದ ಗುಣಮಟ್ಟ, ಶೌಚಾಲಯಗಳ ಶುಚಿತ್ವದ ಬಗ್ಗೆ ಅವರು ಪರಿಶೀಲಿಸಿದ ನಂತರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕು. ಅವರ ಆರೋಗ್ಯದ ಕಡೆಗೆ ಗಮನಹರಿಸಬೇಕು. ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ವಸತಿ ನಿಲಯದಲ್ಲಿರುವ ಸಣ್ಣ ಪುಟ್ಟ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕು ಕಚೇರಿಯ ಶಿರಸ್ತೇದಾರ್ ಶ್ರೀಧರ್, ಸ್ಥಾನಿಕಾ ಅದಿಕಾರಿü ಮಂಜುನಾಥ, ವಾರ್ಡನ್ ಅಶ್ವನಿ ಇತರರಿದ್ದರು.