ಜಿಲ್ಲೆ

ಜಯಂತಿಯ ಪೂರ್ವಭಾವಿ ಸಭೆ ಅ.07ಕ್ಕೆ

ಮಂಜುನಾಥ

ಹೊಸಪೇಟೆ: ಜಿಲ್ಲಾಮಟ್ಟದ ಮತ್ತು ಹೊಸಪೇಟೆ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಯ ಪೂರ್ವಭಾವಿ ಸಭೆ ಅ.07ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲೆಯ ಜನಪ್ರತಿನಿಧಿಗಳು, ಸಂಘ-ಸAಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಅಧಿಕಾರಿಗಳು ಪೂರ್ವಭಾವಿ ಸಭೆಗೆ ಹಾಜರಾಗಿ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.