ಹೊಸಪೇಟೆ: ತಾಲೂಕು ಕಾನೂನು ಸೇವಾ ಸಮಿತಿ, ಹೊಸಪೇಟೆ ವಕೀಲರ ಸಂಘದಿಂದ ನಗರದ ತಾಲೂಕು ನ್ಯಾಯಾಲಯದಲ್ಲಿ ಸೋಮವಾರ ರಾಷ್ಟ್ರೀಯ ಸ್ವಚ್ಛತಾ ದಿನ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ್ ಎ. ನಂದಗಡಿ ಮಾತನಾಡಿ, ಕಲುಷಿತ ವಾತಾವರಣ ಅನಾರೋಗ್ಯಕ್ಕೆ ಕಾರಣ. ಮನೆ, ಕಚೇರಿ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಉತ್ತಮ ವಾತಾವರಣದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಮನೋಲ್ಲಾಸವೂ ಉಂಟಾಗುತ್ತದೆ ಎಂದರು.
2ನೇ ಅಪರ ಸಿವಿಲ್ ನ್ಯಾಯಾಧೀಶ ಜಿ. ಸಂಜೀವಕುಮಾರ, 3ನೇ ಅಪರ ಸಿವಿಲ್ ನ್ಯಾಯಾಧೀಶೆ ಚೈತ್ರಾ ಜೆ., ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಬಸವರಾಜ, ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ, ಆಡಳಿತ ಸಹಾಯಕ ಎಸ್.ಬಿ. ಕಮತಗಿ ಪಾಲ್ಗೊಂಡಿದ್ದರು.