ಜಿಲ್ಲೆ

ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ

ಹೊಸಪೇಟೆ: ಹೈದರಾಬಾದ್ ನಿಜಾಮನ ದಬ್ಬಾಳಿಕೆ ವಿರುದ್ಧ ನಡೆದ ಹೋರಾಟ ನೂರಾರು ಜನರ ತ್ಯಾಗ, ಬಲಿದಾನದ ಪ್ರತೀಕವೇ. ಕಲ್ಯಾಣ ಕರ್ನಾಟಕ ಉತ್ಸವ ಎಂದು ಜಿಲ್ಲಾಧಿüಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕು 13 ತಿಂಗಳು 2 ದಿನದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ‍್ಯ ಸಿಕ್ಕಿದೆ. ಇದಕ್ಕಾಗಿ ನಡರದ ಹೋರಾಟ, ತ್ಯಾಗ-ಬಲಿದಾನ ಕೊನೆಗೆ ಪಟೇಲರ ನಿರ್ಧಾರದಿಂದ ಹೈದರಾಬಾದ್ ಕರ್ನಾಟಕ ಭಾರತದಲ್ಲಿ ವಿಲೀನವಾಗಿ ಕಲ್ಯಾಣ ಕರ್ನಾಟಕವಾಯಿತು. ನಂತರ 2013 ರಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಿದ್ದು, ಇದು ಈ ಭಾಗದ 40 ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೂ ಸೇರಿದಂತೆ, ಎಲ್ಲಾ ಭಾಗಗಳ ಮೂಲಭೂತ ಸೌಕರ್ಯ, ಆರೋಗ್ಯ, ಸಾಮಾಜಿಕ, ರಸ್ತೆ ಸಂಪರ್ಕ ಶುದ್ಧ ಕುಡಿವ ನೀರಿನ ವ್ಯವಸ್ಥೆ, ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕೆ ಅನುದಾನವನ್ನು ಮೀಸಲಿರಿಸಲಾಗಿದೆ. ವಿಜಯನಗರ ಜಿಲ್ಲೆಗೆ 2025-26 ನೇ ಸಾಲಿನ ಮೈಕ್ರೋ ಕ್ರಿಯಾ ಯೋಜನೆ ಅಡಿಯಲ್ಲಿ 22,445.34 ಲಕ್ಷ ರೂ. ಮತ್ತು ಮ್ಯಾಕ್ರೋ ಯೋಜನೆಯಡಿಯಲ್ಲಿ 9,454.90 ಲಕ್ಷ ರೂ. ಅನುದಾನ ಹಂಚಿಕೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗವಾದ ವಿಜಯನಗರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ದುಡಿದು ಅಭಿವೃದ್ಧಿ ಸಾಧಿಸೋಣ ಎಂದರು.

ಪರೇಡ್ ಕಮಾಂಡರ್ ಗೋವಿಂದ್ ನೇತೃತ್ವದಲ್ಲಿ ಪೊಲೀಸ್, ಗೃಹರಕ್ಷದಳ, ಎನ್‌ಸಿಸಿ, ಗೈಡ್ಸ್, ಸೇವಾದಳ, ವಿವಿಧ ಶಾಲೆಗಳು ಒಳಗೊಂಡAತೆ ತಂಡಗಳಿAದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಮಕ್ರಮಗಳು ನಡೆದವು. ಹೂವಿನಹಡಗಲಿ ಸರ್ಕಾರಿ ಬಾಲಕಿಯರ ಕಾಲೇಜಿನ ಉಪನ್ಯಾಸಕ ಗುರುಬಸವರಾಜ್ ವಿಶೇಷ ಉಪನ್ಯಾಸ ನೀಡಿದರು.

ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಕೆ.ಶಿವಮೂರ್ತಿ, ಜಿ.ಪಂ. ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಷಾ, ಎಸ್ಪಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಉಪವುಭಾಗಿಯಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ ಶೃತಿ ಎಂ.ಮಳ್ಳಪ್ಪಗೌಡ್ರ್ ಇತರರಿದ್ದರು.