Kannada ceremony camp 
ಜಿಲ್ಲೆ

ನಾಡು ನುಡಿಗಾಗಿ ಸದಾ ಸನ್ನದ್ಧರಾಗಿರೋಣ

ಮಂಜುನಾಥ

ಹೊಸಪೇಟೆ: ಕನ್ನಡ ರಾಜ್ಯೋತ್ಸವ ನಿಮಿತ್ತ ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಕನ್ನಡ ಸಾಂಸ್ಕೃತಿಕ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ಹುಡಾ ಅಧ್ಯಕ್ಷ ಅಧ್ಯಕ್ಷ ಎಚ್.ಎನ್.ಮಹಮ್ಮದ್ ಇಮಾಮ್ ನಿಯಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಕನ್ನಡಿಗನೇ ಸಾರ್ವಭೌಮ, ಕನ್ನಡ ನಾಡು, ನುಡಿ, ನೆಲ, ರಕ್ಷಣೆಗಾಗಿ ನಾವು ನೀವೆಲ್ಲರೂ ಸದಾ ಸನ್ನದ್ಧರಾಗಿರೋಣ. ಅತ್ಯಾಧುನಿಕ ಯುಗದಲ್ಲಿ ಕೆಲಸದ ಒತ್ತಡಗಳ ನಡುವೆಯೂ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ದೇಹದ ಆರೋಗ್ಯವÀನ್ನು ಕಾಪಾಡಿಕೊಳ್ಳುವುದರಲ್ಲಿ ನಮಗೆ ನಾವೇ ಎಚ್ಚರವಹಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಇಂತಹ ಈ ಒಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ವೇದಿಕೆಯ ರಾಜ್ಯಾಧ್ಯಕ್ಷ ವಿರುಪಾಕ್ಷ ಗೌಡ ಹೇರೂರು, ಜಿಲ್ಲಾಧ್ಯಕ್ಷ ರಾಘು ಗುಜ್ಜಲ್, ಪ್ರಮುಖರಾದ ಗುಜ್ಜಲ್ ಗಣೇಶ್, ಜೋಗಿ ತಾಯಪ್ಪ, ಅಂಜಲಿ, ಕಟಗಿ ಜಂಬಯ್ಯ, ಸರಳ ಕಾವ್ಯ, ಪ್ರಕಾಶ್, ಮಧುರ ಚೆನ್ನ ಶಾಸ್ತಿ ಇತರರಿದ್ದರು.