ಜಿಲ್ಲೆ

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ ಮೇ.25

ಮಂಜುನಾಥ

ಹೊಸಪೇಟೆ: ಜಾನ್ ಬೆಂಜಮಿನ್ ಮಾರ್ಷಲ್ ಆರ್ಟ್ಸ್ ಟ್ರಸ್ಟ್ನಿಂದ ನಗರದ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ಮೇ.25ರಂದು ಹಂಪಿ ಓಪನ್ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ನ ಉಪಾಧ್ಯಕ್ಷ ಜಂಬಯ್ಯನಾಯಕ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮೊದಲ ಬಾರಿಗೆ ರಾಷ್ಟ್ರ ಮಟ್ಟದ ಕರಾಟೆ ಪಂದ್ಯ ಹಮ್ಮಿಕೊಂಡಿದ್ದು, ಕಥಾ ಮತ್ತು ಕುಮಿಥೆ ಎರಡು ವಿಭಾಗಗಳಲ್ಲಿ 6ರಿಂದ 60 ವರ್ಷದವರೆಗಿನವರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್, ಸ್ಕೂಲ್ ಗೇಮ್ ಫೆಡರೇಷನ್ ಆಫ ಇಂಡಿಯಾ ಮತ್ತು ಕರಾಟೆ ಇಂಎಇಯಾ ಆರ್ಗನೈಜೇಷನ್ ಅಡಿಯಲ್ಲಿ ನಡೆಯುವ ಒಂದು ದಿನದ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಸ್ಪರ್ಧಿಗಳಿಗೆ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಸಹಕಾರಿಯಾಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಮತ್ತು ಆಂಧ್ರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಸೇರಿ ನಾನಾ ರಾಜ್ಯಗಳಿಂದ ಸುಮಾರು 600ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸ್ಪರ್ಧಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಚೀಫ್ ಆರ್ಗನೈಸರ್ ಎ.ಹನುಮಂತಪ್ಪ, ಗೌರವಾಧ್ಯಕ್ಷ ಸಿ.ಎ.ಗಾಳೆಪ್ಪ, ಅಧ್ಯಕ್ಷ ಸುರೇಶ್ ಗುಜ್ಜಲ್, ಜಿ.ರಾಘವೇಂದ್ರ, ಬಸಣ್ಣ, ಶರಬಯ್ಯ, ವೀರೇಂದ್ರಕುಮಾರ್, ಉಮೇಶ್ ಇದ್ದರು.