ಜಿಲ್ಲೆ

ಸುಸೂತ್ರವಾಗಿ ನಡೆದ ಕೆಎಎಸ್ ಪರೀಕ್ಷೆ

ಹೊಸಪೇಟೆ: ರಾಜ್ಯ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಭಾವಿ ಮರುಪರೀಕ್ಷೆ ಜರುಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ನಗರ ಹಾಗೂ ಹಗರಿಬೊಮ್ಮನಹಳ್ಳಿ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಅಭ್ಯರ್ಥಿಗಳು ಹಾಲ್ ಟಿಕೆಟ್‌ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಸರಿಯಾಗಿ ಓದಿಕೊಂಡು ನಿಯಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಅಭ್ಯರ್ಥಿಗಳಿಗೆ ತಾಕೀತು ಮಾಡುತ್ತಿದ್ದ ದೃಶ್ಯ ಕಂಡು ಬಂತು. ಎಲ್ಲಾ ಮಾದರಿಯ ಎಲೆಕ್ಟ್ರಾನಿಕ್ಸ್ ವಸ್ತುಗಳು, ತುಂಬು ತೋಳಿನ ವಸ್ತ್ರಗಳನ್ನು ನಿಷೇಧಿಸಲಾಗಿತ್ತು. ಅಭ್ಯರ್ಥಿಗಳು ಸರಳ ಉಡುಪು ಧರಿಸಿ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರಾದರು.

ಆ.27ರಂದು ನಡೆದ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲಿಷ್‌ನಿAದ ಕನ್ನಡಕ್ಕೆ ಭಾಷಾಂತರ ಮತ್ತು ವಾಕ್ಯ ರಚನೆಯಲ್ಲಿ ಲೋಪ, ಅಸಂಬದ್ಧ ವಾಕ್ಯ ರಚನೆ ಸೇರಿ ಅನೇಕ ತಪ್ಪುಗಳು ಕಂಡುಬAದಿದ್ದವು. ಈ ಕುರಿತು ಹಲವರು ಆಕ್ಷೇಪ ವ್ಯಕ್ತಪಡಿಸಿ ಮರುಪರೀಕ್ಷೆಗೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಪಿಎಸ್ಸಿ ಆ.27ರಂದು ನಡೆಸಿದ್ದ ಪರೀಕ್ಷೆಯನ್ನು ರದ್ದುಪಡಿಸಿ ಭಾನುವಾರ ಮರುಪರೀಕ್ಷೆ ನಡೆಸಿದೆ.