ಹೊಸಪೇಟೆ: ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ (ಪುಡ್ ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಗಳಡಿ ಸೌಲಭ್ಯ ಕೋರಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಿಗಮದಿಂದ ಮಾತ್ರ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ ಅರ್ಜಿಗಳನ್ನು ಅರ್ಹಫಲಾನುಭವಿಗಳಿಂದ ಅರ್ಜಿಗಳನ್ನು ಆನ್‌ಲೈನ್ ತಂತ್ರಾಂಶದ ಸೇವಾಸಿಂಧು ಪೋರ್ಟಲ್, ಗ್ರಾಮ ಓನ್, ಕರ್ನಾಟಕ ಓನ್ ಕೇಂದ್ರಗಳಲ್ಲಿ ಡಿ.29 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಸಲ್ಲಿಸುವಂತಿಲ್ಲ.