ಹೊಸಪೇಟೆ: ಮೈಕ್ರೋಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು, ಇತರೆ ವ್ಯಕ್ತಿಗಳು, ಸಂಸ್ಥೆಗಳಿAದ ಸಾಲಗಾರರಿಗೆ ಕಿರುಕುಳ ನೀಡುವುದು ಕಂಡು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು, ಹಣಕಾಸು ಸಂಸ್ಥೆಗಳ ವರ್ತಕರು ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಮಾತನಾಡಿದರು.
ಸಾಲ ನೀಡುವ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್‌ಬಿಐ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸಾಲ ವಸೂಲಿಗಾಗಿ ಹೊರ ವ್ಯಕ್ತಿಗಳು, ಅಪರಾಧ ಹಿನ್ನಲೆ ಹೊಂದಿರುವವರನ್ನು ಬಳಸಿ ಬೆದರಿಕೆ ಹಾಕಬಾರದು. ಸಾಲ ಪಡೆದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಅವಮಾನಿಸುವುದು, ಹಿಂಸೆ ನೀಡುವಂತಿಲ್ಲ. ಸಾಲಗಾರರ ಸ್ವಾಧೀನದಲ್ಲಿರುವ ವಸ್ತುಗಳು, ಆಸ್ತಿಗಳ ಬಳಕೆಗೆ ಅಡ್ಡಿಪಡಿಸಬಾರದು. ಸಾಲಗಾರರನ್ನು ರಕ್ಷಿಸಲು ಸರ್ಕಾರದಿಂದ ಹೊರಡಿಸಲಾಗುವ ಹೊಸ ಆಜ್ಞೆ ಹಾಗೂ ಆದೇಶಗಳನ್ನು ನಿರೀಕ್ಷಿಸಲಾಗಿದೆ. ಇದರಂತೆ ಕಿರುಕುಳ ನೀಡುವ ಮೈಕ್ರೊ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮವಹಿಸಲಿದ್ದೇವೆ ಸೂಚನೆ ನೀಡಿದರು.
ಮೈಕ್ರೊ ಫೈನಾನ್ಸ್ ಕಂಪನಿ ಕಿರುಕುಳ ಕುರಿತ ದೂರು ಸಲ್ಲಿಸಲು 08394 231575 ಸಹಾಯವಾಣಿ ತೆರೆಯಲಾಗಿದೆ. ನೊಂದಣಿ ಪರವಾನಗಿ ಹೊಂದಿರುವವರು ಹಾಗೂ ಇಲ್ಲದಿರುವ ಎಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು ಇತರೆ ಸಾಲ ನೀಡುವವರ ಮೇಲೆ ನಿಗಾವಹಿಸಿದ್ದೇವೆ. ಎಲ್ಲ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಜಿಲ್ಲೆಯ ಎಲ್ಲಿಯೇ ಆಗಲಿ ಸಾಲಗಾರರಿಗೆ ಅನಾವಶ್ಯಕವಾಗಿ ತೊಂದರೆ ನೀಡುವವರ ವಿರುದ್ದ ಕ್ರಮ ವಹಿಸುತ್ತೇವೆ. ಕಂಪನಿಗಳು ನಿಯಮಾವಳಿ, ಮಾರ್ಗಸೂಚಿ ಉಲ್ಲಂಘನೆ ಮಾಡಬಾರದು ಎಂದರು.
ಎಸ್ಪಿ ಬಿ.ಎಲ್.ಶ್ರೀಹರಿಬಾಬು ಮಾತನಾಡಿ, ಸಾಲಗಾರರಿಗೆ ಶೋಷಣೆ ಮಾಡುವಂತಿಲ್ಲ. ಸಾಲ ಕಟ್ಟುವ ಸಾಮಥ್ರ‍್ಯವಿಲ್ಲದಿದ್ದರೂ ಲಾಭವನ್ನಷ್ಟೇ ಕೇಂದ್ರಕರಿಸಿ ಸಾಲ ನೀಡಿ ಬಳಿಕ ಬಲವಂತದ ವಸೂಲಿಗೆ ಫೈನಾನ್ಸ್ ಕಂಪನಿಗಳು ಮುಂದಾಗಬಾರದು. ಸಾಲ ನೀಡುವ ಮುನ್ನ ಸಾಲಗಾರರ ದುಡಿಮೆ ಆದಾಯವನ್ನು ನೋಡಬೇಕು. ಸಾಲ ಪಡೆದುಕೊಂಡವರಿಗೆ ಕಿರುಕುಳ, ಅವಮಾನ, ನಿಂದನೆ ಮಾಡುವುದನ್ನು ಸಹಿಸುವುದಿಲ್ಲ. ಕಿರುಕುಳಕ್ಕೆ ಸಂಬAಧಿಸಿದ ದೂರುಗಳು ಬಂದರೆ ನಿಯಮಾನುಸಾರ ಪ್ರಕರಣ ದಾಖಲು ಮಾಡಿ ತ್ವರಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.