ಹೊಸಪೇಟೆ: ಯಾವುದೇ ಸಮಾಜವು ಪ್ರಗತಿಯಾಗಬೇಕಾದರೆ ಆ ಸಮಾಜದ ಮಕ್ಕಳು ವಿದ್ಯಾವಂತರಾಗಬೇಕು. ಈ ನಿಟ್ಟಿನಲ್ಲಿ ಯೋಚಿಸಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡುವುದು ನಮ್ಮ ಜವಾಬ್ದಾರಿ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜನ್ಮ ದಿನಾಚರಣೆ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಹಿಂದುಳಿದ ರ‍್ಗಗಳ ಹಾಗೂ ದಲಿತರ ಏಳಿಗೆಗೆ ಶ್ರಮಿಸಿದರು. ಬಸವಣ್ಣನವರಂತೆ ಸಮಾಜ ಬದಲಾವಣೆಯ ಆಶಯ ಹೊಂದಿದ್ದರು. ಜನಮುಖಿ ಸಿದ್ಧಾಂತಕ್ಕೆ ಬದ್ಧರಾಗಿ ಕೆಲಸ ಮಾಡಿದರು ಎಂದರು.
ಕಡಿಮೆ ಜನಸಂಖ್ಯೆ ಇರುವ ಸಮುದಾಯಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆಂದೇ ರ‍್ಕಾರ ಹಲವಾರು ನಿಗಮಗಳನ್ನು ರಚಿಸಿ ಅನುದಾನ ಮೀಸಲಿರಿಸಿ ಅಂತಹ ಸಮುದಾಯಗಳ ಏಳಿಗೆಗೆ ಶ್ರಮಿಸಲಾಗುತ್ತಿದೆ. ಆಯಾ ನಿಗಮಗಳಲ್ಲಿ ಇರುವ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ವಿವಿಧ ಯೋಜನೆಗಳ ಸದುಪಯೋಗ ಪಡೆಯಬೇಕು ಸಲಹೆ ಮಾಡಿದರು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಮಾತನಾಡಿ, ರ‍್ಕಾರ ಹಲವಾರು ಜಯಂತಿಗಳನ್ನು ಆಚರಣೆ ಮಾಡುತ್ತಿದೆ. ಈ ಮೂಲಕ ಮಹಾತ್ಮರ ಆಶಯಗಳು, ಸಿದ್ಧಾಂತ ಹಾಗೂ ಅವರ ಸಮಾಜಮುಖಿ ಕರ‍್ಯಗಳನ್ನು ಜನತೆಗೆ ತಿಳಿಸುವ ಕರ‍್ಯವಾಗುತ್ತಿದೆ. ಬ್ರಹ್ಮಶ್ರೀ ನಾರಾಯಣ ಗುರು ಅವರ ಕರ‍್ಯಗಳು ಸದಾಕಾಲ ಸ್ಮರಣೀಯವಾಗಿವೆ. ಅಸ್ಪೃಶ್ಯತೆ ಆಚರಣೆ ತಡೆಯುವ ಮಹತ್ವದ ಕರ‍್ಯ ಮಾಡಿದರು. ಜನರಲ್ಲಿ ದೇಶಭಕ್ತಿಯ ಭಾವವನ್ನು ಬೆಳೆಸಿದರು ಎಂದರು. ಈ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಈಡಿಗ ಸಮಾಜದ ವಿದ್ಯರ‍್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.