ಜಿಲ್ಲೆ

ವಿಜಯನಗರಕ್ಕೆ ನಾಲ್ಕು ನರೇಗಾ ಪ್ರಶಸ್ತಿ

ಮಂಜುನಾಥ

ಹೊಸಪೇಟೆ: ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು 2023-24ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುವಲ್ಲಿ ಸಾಧನೆ ಮಾಡಿದ ಕಾರಣ ವಿಜಯನಗರ ಜಿಪಂ ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

ಬೆAಗಳೂರಿನಲ್ಲಿ ಬುಧವಾರ ನಡೆದ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ ಅವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರೀಯಾಂಕ್ ಖರ್ಗೆ ಪ್ರಶಸ್ತಿ ನೀಡಿದರು. ಕೃಷಿ ಇಲಾಖೆ ಜೆಡಿ ಶರಣಪ್ಪ ಮುದುಗಲ್ ಇತರೆ ಅಧಿಕಾರಿಗಳಿದ್ದರು.

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ನಿಗದಿಪಡಿಸಿದ ಮಾನದಂಡಗಳಿಗೆ ಅನುಗುಣವಾಗಿ ಕೃಷಿ ಹಾಗೂ ರೇಷ್ಮೆ ಅತ್ಯುತ್ತಮ ಒಗ್ಗೂಡಿಸುವಿಕೆ, ಹೂವಿನಹಡಗಲಿ ತಾಲೂಕು ಪಂಚಾಯಿತಿಗೆ ಅತ್ಯುತ್ತಮ ಪ್ರಶಸ್ತಿ ಹಾಗೂ ಹೂವಿನ ಹಡಗಲಿಯ ಹ್ಯಾರಡ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಪ್ರಶಂಸೆ ಪ್ರಶಸ್ತಿ ಲಭಿಸಿದೆ.