ಹೊಸಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಈ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.4 ಕೊನೆಯ ದಿನವಾಗಿದೆ. ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣಾಧಿಕಾರಿಗಳು ಪರಿಶೀಲನೆ ಮಾಡಲು ಸೆ.6 ಅಂತಿಮ ದಿನವಾಗಿದೆ. ಆಯ್ಕೆಪಟ್ಟಿ ಸೆ. 11ರಂದು ಪ್ರಕಟಣೆ ಮಾಡಲಾಗುತ್ತದೆ. ಸೆ.17ರಂದು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಥವಾ ತಾಲೂಕು ಅಧಿಕಾರಿಗಳು ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.