ಜಿಲ್ಲೆ

ನಮ್ಮ ಸಮಸ್ಯೆಗಳನ್ನು ಪರಿಹರಿಸಿ

ಮಂಜುನಾಥ

ಹೊಸಪೇಟೆ: ವಿವಿಧ ಬೇಡಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದಿಂದ ಜಿ.ಪಂ. ಆವರಣದಲ್ಲಿ ಪ್ರತಿಭಟನೆ ಮಾಡಿ ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಶಾ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ರಾಜ್ಯದ ಶೇಕಡ 68 ರಿಂದ 70 ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯಿತಿಗಳಿAದ ಶೇ.70ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ನೌಕರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಗ್ರಾ.ಪಂ.ಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೇವಲ ಎಲ್ಲಾ ಸಮಸ್ಯೆಗಳಿಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು, ನೌಕರರನ್ನು ಹಾಗೂ ಸಿಬ್ಬಂದಿಗಳನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯಾಗಿದೆ. ಗ್ರಾಮ ಪಂಚಾಯತಿಯ ಸೇವೆಗಳಾದ ನರೇಗಾ, 15ನೇ ಹಣಕಾಸು ಯೋಜನೆ ಕಾರ್ಯಕ್ರಮಗಲೂ, ವಸತಿ ಯೋಜನೆಯ ಆಶ್ರಯ ಮನೆಗಳ ನಿರ್ಮಾಣ, ಇ. ಜಾಮಾ, ಸ್ವಚ್ಚ ಭಾರತ್ ಮಿಷನ್, ಬಾಫೂಜಿ ಸೇವೆ ಕೇಂದ್ರದ ಸೇವೆಗಳು, ಗ್ರಾಮಗಳಲ್ಲಿ ಕಸ ಸಂಗ್ರಹಣೆ, ಕುಡಿಯುವ ನೀರು ಸರಬರಾಜು, ವಿದ್ಯುತ್ ದೀಪಗಳ ನಿರ್ವಹಣೆ, ಕಚೇರಿ ಕರ್ತವ್ಯ ನಿರ್ವಹಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.