filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:8; brp_del_th:0.0304,0.0020; brp_del_sen:0.1000,0.1000; motionR: 0; delta:1; bokeh:1; module: photo;hw-remosaic: false;touch: (-1.0, -1.0);sceneMode: 2621440;cct_value: 0;AI_Scene: (-1, -1);aec_lux: 226.21341;aec_lux_index: 0;albedo: ;confidence: ;motionLevel: 65537;weatherinfo: null;temperature: 42; 
ಜಿಲ್ಲೆ

ಜನಸ್ಪಂದನದಲ್ಲಿ ಅಹವಾಲು ಮಹಾಪೂರ

ಮಂಜುನಾಥ

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿಯಿAದ ನಗರದ ಜಿಲ್ಲಾಧಿಕಾರಿ ಕಚೇರಿಯ ಅವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮೂಲಕ ಜನಸ್ಪಂದನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಶನಿವಾರ ಚಾಲನೆ ನೀಡಿದರು.

ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾAಶದಲ್ಲಿ ನಮೂದಿಸಿ ಮೊಬೈಲ್ ಮೂಲಕ ಅರ್ಜಿದಾರರನ್ನು ಸಂಪರ್ಕಿಸಿ ಪರಿಹಾರ ಒದಗಿಸಲಾಗುತ್ತದೆ. ಸಾರ್ವಜನಿಕರ ಅಹವಾಲು ಸ್ವಿಕರಿಸಲು ಜಿಲ್ಲಾಡಳಿತದಿಂದ ಇಲಾಖೆಗಳ ಕೌಂಟರ್ ಸ್ಥಾಪಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಜನರು ಆಯಾ ಇಲಾಖೆಯ ಕೌಂಟರ್ ಬಳಿ ಒಟ್ಟು 84 ಅರ್ಜಿ ಸಲ್ಲಿಕೆಯಾದವು. ಸ್ಥಳದಲ್ಲೇ 2 ಅರ್ಜಿಗಳು ಇತ್ಯಾರ್ಥವಾದವು. 82 ಅರ್ಜಿಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.

ರೈತ ಸಂಘದ ಅಧ್ಯಕ್ಷ ಟಿ.ನಾಗರಾಜ ಸಕ್ಕರೆ ಕಾರ್ಖನೆ ಸ್ಥಾಪನೆಗೆ ಕ್ರಮಕೈಗೊಳ್ಳಬೇಕು ಚರ್ಚಿಸಿದರು. ಸಚಿವ ಜಮೀರ್ ಸಿಎಂ ಜತೆಯಲ್ಲಿ ಚರ್ಚಿಸಲಾಗುವುದು ಎಂದರು. ಕಾರಿಗನೂರುನ 23ನೇ ವಾರ್ಡ್ನಲ್ಲಿ ಮೂಲಸೌಕರ್ಯ ಕಲ್ಪಿಸಲು ಹಾಗೂ ಮನೆಗಳನ್ನು ರಿಜೀಸ್ಟ್ರೆಷನ್ ಮಾಡಿಸುವಂತೆ ಅರ್ಜಿಯನ್ನು ಸಲ್ಲಿಸಲಾಯಿತು. ಸೇರಿದಂತೆ ನಿವೇಶ, ಮನೆಗಳ ಅರ್ಜಿಗಳು ಬಹಳಷ್ಟು ಬಂದವು.

ನAತರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಾಧನೆ ಮಾಡಿದ ಸಂಜನಾ ಬಾಯಿ, ಕೆ.ನಿರ್ಮಲ ಅವರನು ಸನ್ಮಾನಿಸಿದರು. ತಲ 5 ಲಕ್ಷ ರೂ. ಮತ್ತು ತಲ ಒಂದು ಬೈಕ್ ಹಾಗೂ ಕೊಟ್ಟೂರಿನ ಹ್ಯಾಳಾ ಗ್ರಾಮ ನಾಗಲಕ್ಷೀ, ಕೂಡ್ಲಿಗಿಯ ಶಿವಪುರದ ಯಲ್ಲಮ್ಮ ವಿದ್ಯಾರ್ಥಿಗಳಿಗೆ ತಲ ಒಂದು ಲಕ್ಷ ರೂ. ವಿತರಿಸಲಾಯಿತು.

ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ. ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಎಸ್ಪಿ ಬಿ.ಎಲ್.ಶ್ರೀಹರಿಬಾಬು, ಎಎಸ್ಪಿ ಸಲೀಂ ಪಾಷಾ, ಉಪವಿಭಾಗಿಯಾಧಿಕಾರಿ ವಿವೇಕಾನಂದ, ತಹಶೀಲ್ದಾರ್ ಶೃತಿ ಎಂ.ಮಳ್ಳಪ್ಪ ಗೌಡ್ರ್ ಇತರರಿದ್ದರು.