ಜಿಲ್ಲೆ

ಬಸ್ ಅಪಘಾತದಲ್ಲಿ ಮೃತ ಕುಟುಂಬಕ್ಕೆ ಪರಿಹಾರ ಘೋಷಿಸಿ

ಮಂಜುನಾಥ

ಹೊಸಪೇಟೆ: ರಾಯಚೂರು ಜಿಲೆಯಲ್ಲಿ ಶಾಲಾ ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಎಸ್.ಎಫ್.ಐ ಸಂಘಟನೆಯ ಜಿಲ್ಲಾಧ್ಯಕ್ಷ ಸೂರ್ಯ ಒತ್ತಾಯಿಸಿದ್ದಾರೆ.

ರಾಯಚೂರು ಜಿಲ್ಲೆಯ ಕಪಗಲ್ ಗ್ರಾಮದ ಬಳಿಯಲ್ಲಿ ನಡೆದ ದುರಂತದ ರಸ್ತೆ ಅಪಘಾತದಲ್ಲಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕಾಲು ಕಳೆದುಕೊಂಡವರು ಹಾಗೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಕ್ಷಣ ಆರ್ಥಿಕ ಪರಿಹಾರ ಘೋಷಿಸಬೇಕು. ಮೃತರ ಕುಟುಂಬಕ್ಕೆ 50 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಮಕ್ಕಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ, ಪುನರ್ವಸತಿ ಮತ್ತು ಕೃತಕ ಅಂಗಗಳ ನೆರವು ನೀಡಬೇಕು ಎಂದು ಆಗ್ರಹಿಸಿದರು.
ರಸ್ತೆಯಲ್ಲಿ ಗುಂಡಿಗಳಿದ್ದ ಕಾರಣ ಬಸ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ರಸ್ತೆಗಳ ತಕ್ಷಣದ ದುರಸ್ತಿ ಮತ್ತು ನಿರ್ವಹಣೆ ಅವಶ್ಯಕವಾಗಿ ಮಾಡಬೇಕು. ಶಾಲಾ ಬಸ್‌ಗಳಿಗೆ ಸ್ಪೀಡ್ ಕಂಟ್ರೋಲರ್‌ಗಳು, ಜಿಪಿಎಸ್ ಮತ್ತು ಸಿಸಿಟಿವಿ ಹಾಕಿಸುವುದನ್ನು ಕಡ್ಡಾಯಗೊಳಿಸಬೇಕು. ನುರಿತ ಚಾಲಕರು ಇರಬೇಕು. ಸಂಚಾರಿ ನಿಯಮ ಪಾಲನೆ ಕಡ್ಡಾಯ. ಸೀಮಿತ ಆಸನಗಲ್ಲಿ ವಿದ್ಯಾರ್ಥಿಗಳನ್ನು ಕೊಂಡೊಯ್ಯುಬೇಕು. ⁠ಸರಕು ಸಾಗಾಣಿಕೆ ವಾಹನದಲ್ಲಿ ಮಕ್ಕಳನ್ನು ಪ್ರಯಾಣಿಸುವುದರ ವಿರುದ್ದ ಗಂಭೀರವಾಗಿ ಕ್ರಮಕೈಗೊಳ್ಳಬೇಕು. ಚಾಲಕರು ಮೂರು ತಿಂಗಳಿಗೊಮ್ಮೆ ದೈಹಿಕ ಆರೋಗ್ಯ ತಪಾಸಣೆ ನಡೆಸಲು ಸರ್ಕಾರವೇ ಮುತುವರ್ಜಿ ವಹಿಸಬೇಕು. ತಪ್ಪಿದಸ್ತರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.