ಹೊಸಪೇಟೆ: ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ದೇಶದ ಸ್ವಾಂತAತ್ರö್ಯಕ್ಕಾಗಿ ವೀರಸೇನಾನಿಗಳನ್ನು ಬಡಿದೆಬ್ಬಿಸಿದ ಕೀರ್ತಿ ಮೊದಲ ಮಹಿಳಾ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ ಮತ್ತು ಸಾಹಸ ಮಹಿಳೆಯರಿಗೆ ಆದರ್ಶಪ್ರಾಯ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು,
ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸಮುದಾಯಕ್ಕೆ ದೊಡ್ಡ ಪ್ರೇರಣಾ ಶಕ್ತಿ ಆಗಿದ್ದಾರೆ. ಅವರ ದೃಡ ನಿರ್ಧಾರ ಮತ್ತು ಹೋರಾಟದ ಮನೋಭಾವ ಪ್ರತಿಯೊಬ್ಬ ಮಹಿಳೆಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸ್ಫೂರ್ತಿ ನೀಡುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿಯೂ ಅವರು ದಕ್ಷತೆಯಿಂದ ರಾಜ್ಯಭಾರ ನಡೆಸಿ, ಕಠಿಣ ಪರಿಸ್ಥಿತಿಗಳಲ್ಲಿ ರಾಜ್ಯ ಮತ್ತು ಜನರ ಹಿತಾಸಕ್ತಿಯನ್ನು ಕಾಪಾಡಿದ್ದರು. ಮಹಿಳೆಯರು ಆಡಳಿತ, ರಾಜಕೀಯ ಸೇರಿ ಯಾವುದೇ ಕ್ಷೇತ್ರದಲ್ಲಿ ಸಫಲ ನಾಯಕರಾಗಬಲ್ಲರು ಎಂಬುದನ್ನು ಅವರು ಸಾಬೀತು ಪಡಿಸಿದ್ದಾರೆ. ಚಿಕ್ಕಂದಿನಿAದಲೂ ಕುದುರೆ ಸವಾರಿ, ಕತ್ತಿವರಸೆ ಹಾಗೂ ಬಿಲ್ಲುಗಾರಿಕೆ ಕೌಶಲ್ಯಗಳಲ್ಲಿ ನಿಪುಣರಾಗಿದ್ದರು. ಇಂದಿನ ಮಹಿಳೆಯರಿಗೂ ಸ್ವಯಂರಕ್ಷಣೆಗೆ ಕೆಲವು ಕೌಶಲ್ಯಗಳ ಕಲಿಕೆ ಅಗತ್ಯವಿದೆ. ಕಲಿಯಲು ಹೆಣ್ಣುಮಕ್ಕಳು ಮುಂದಾಗಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿ.ಪಂ. ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಗೊಗ್ಗ ಚನ್ನಬಸವರಾಜ್, ಪ್ರಧಾನ ಕಾರ್ಯದರ್ಶಿ ನೀಲಕಂಠ ಗೌಡ, ಪ್ರಮುಖರಾದ ಕಿಚಡಿ ಕೊಟ್ರೇಶ್, ರವಿಶಂಕರ್, ಶರಣು ಸ್ವಾಮಿ, ಎಲ್.ಬಸವರಾಜ್, ಮಧುರಚನ್ನಶಾಸ್ತಿç ಇತರರಿದ್ದರು.