ಜಿಲ್ಲೆ

ರಾಷ್ಟ್ರೀಯ ಲೋಕ ಆದಾಲತ್ ಡಿ.14ಕ್ಕೆ

ಮಂಜುನಾಥ

ಹೊಸಪೇಟೆ: ತಾಲೂಕು ಕಾನೂನು ಸೇವಾ ಸಮಿತಿಯಿಂದ ರಾಷ್ಟ್ರೀಯ ಲೋಕ ಆದಾಲತ್ ಕಾರ್ಯಕ್ರಮ ಡಿ.14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನ್ಯಾಯಾಲಯಗಳ ಆವರಣದಲ್ಲಿ ನಡೆಯಲಿದೆ.

ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿ ಇರುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳಬಹುದು ಎಂದು ಹೊಸಪೇಟೆ ಪ್ರದಾನ ಸಿವಿಲ್ ನ್ಯಾಯಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.