ಜಿಲ್ಲೆ

ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ

ಮಂಜುನಾಥ

ಹೊಸಪೇಟೆ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ 100 ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ 25 ಸಾವಿರ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಡಿ.14ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ವಿಜಯನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.