ಹೊಸಪೇಟೆ: ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹಾಗೂ ನಗರದ ಶಾಸಕ ಎಚ್.ಆರ್.ಗವಿಯಪ್ಪ ಹೊರವಲಯಕ್ಕೆ ಭಾನುವಾರ ಭೇಟಿ ನೀಡಿ ರಿಂಗ್ ರೋಡ್ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿದರು.
ದಿನೇದಿನೆ ಜನ ಸಂಪರ್ಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟಿçÃಯ ಹೆದ್ದಾರಿ 50ರಿಂದ ಹೊಸಪೇಟೆ ನಗರಕ್ಕೆ ಸಂಪರ್ಕಕ್ಕೆ ಅಗತ್ಯವಿರುವ ರಿಂಗ್ ರೋಡ್ ಮಾರ್ಗದ ಬಗ್ಗೆ ಚರ್ಚಿಸಿದರು. ತಹಸೀಲ್ದಾರ್ ಶೃತಿ ಇತರರಿದ್ದರು.