ಜಿಲ್ಲೆ

ರೋಹಿಣಿ ಆಯೋಗದ ಶಿಫಾರಸ್ಸು ಮಾಡಿ

ಮಂಜುನಾಥ

ಹೊಸಪೇಟೆ: ರೋಹಿಣಿ ಆಯೋಗದ ಶಿಫಾರಸ್ಸು ಜಾರಿ ಮಾಡಿ ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾ ಹಿಂದುಳಿದ ವರ್ಗಗಳ ಪದಾಧಿಕಾರಿಗಳಿಂದ ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ರವಾನಿಸಿದರು.

ಒಕ್ಕೂಟದ ಅಧ್ಯಕ್ಷ ವೈ.ಯಮುನೇಶ್ ಮಾತನಾಡಿ, ಬಿ.ಪಿ.ಮಂಡಲ ಅಧ್ಯಕ್ಷತೆಯ ರಾಷ್ಟಿçÃಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸು ಹಾಗೂ ಸುಪ್ರೀಂ ಕೋರ್ಟ್ನ ತೀರ್ಪಿನಂತೆ ಶೇಕಡ ಶೇ.27 ಉದ್ಯೋಗ ಮೀಸಲಾತಿ ಕಾಯ್ದೆ 1992 ರಿಂದ ಜಾರಿಗೆ ಬಂದಿದೆ. ಆದರೆ ದೇಶದಾಧ್ಯಂತ ಎಲ್ಲಾ ಹಿಂದುಳಿದ ಜಾತಿಗಳನ್ನು ಒಂದೇ ಗುಂಪಿನಲ್ಲಿ ಸೇರಿಸಿರುವುದರಿಂದ ಕೆಲವು ಬಲಿಷ್ಠ ಜಾತಿಗಳಿಗೆ ಮಾತ್ರ ಸಿಂಹಪಾಲು ದೊರೆಯುತ್ತಿದೆ. ಅತೀ ಹಿಂದುಳಿದ ಸಮುದಾಯಗಳಿಗೆ ಉದ್ಯೋಗ ಮೀಸಲಾತಿ ಮರಿಚಿಕೆಯಾಗಿಯೇ ಉಳಿದಿದೆ. ಈ ಅಸಮಾನತೆ ನಿವಾರಿಸಲು 2017ರಲ್ಲಿ ಕೇಂದ್ರ ಸರ್ಕಾರವು ನ್ಯಾಯಮೂರ್ತಿ ರೋಹಿಣಿ ಆಯೋಗ ರಚಿಸಿತು. ಈ ಆಯೋಗ ಹಿಂದುಳಿದ ಮತ್ತು ಅತೀ ಹಿಂದುಳಿದ ಜಾತಿಗಳೆಂದು ವರ್ಗೀಕರಿಸಿ ವಿವಿಧ ಗುಂಪುಗಳಿಗೆ ಮೀಸಲಾತಿ ಪ್ರಮಾಣ ನಿಗಧಿಪಡಿಸಿ 2023ರಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆಯೋಗವು ವೈಜ್ಞಾನಿಕವಾಗಿ ಜಾತಿಗಳ ವರ್ಗೀಕರಣ ಮಾಡಿದ್ದು, ಈ ಶಿಫಾರಸ್ಸನ್ನು ಜಾರಿಗೊಳಿಸಿದರೆ ನೈಜ ಹಾಗೂ ಸಾಮಾಜಿಕ ಶೈಕ್ಷಣಿಕವಾಗಿ ಅತಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಸೌಲಭ್ಯ ದೊರೆಲಿದೆ. ಆದುದರಿಂದ ಕೇಂದ್ರ ಸರ್ಕಾರವು ವಿಳಂಬ ಮಾಡದೆ ನ್ಯಾಯಮೂರ್ತಿ ರೋಹಿಣಿ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಯು.ಆಂಜನೇಯ್ಯಲು, ಪ್ರಮುಖರಾದ ಯು.ಆಂಜನೇಯ್ಯಲು, ರವಿಕುಮಾರ್, ಈ.ಕುಮಾರಸ್ವಾಮಿ, ರ‍್ರಿಸ್ವಾಮಿ, ಕೆ.ರಾಘವೇಂದ್ರ, ಎಂ.ಶAಕ್ರಪ್ಪ, ಎ.ಪಂಪಣ್ಣ, ಪ್ರೋ.ಉಮಾಮಹೇಶ್ವರ್. ಪೊ.ಎಂ.ಕೆ.ಲಕ್ಷö್ಮಣ ಇತರರಿದ್ದರು.