ಜಿಲ್ಲೆ

ಸದ್ಬಾವನಾ ದಿನ ಪ್ರತಿಜ್ಞಾ ವಿಧಿ

ಮಂಜುನಾಥ

ಹೊಸಪೇಟೆ: ಸದ್ಬಾವನಾ ದಿನಾಚರಣೆಯ ನಿಮಿತ್ತ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರು ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿ ಬುಧವಾರ ಬೋಧಿಸಿದರು.

ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು. ಅಲ್ಲದೇ ವೈಯಕ್ತಿಕವಾಗಲಿ ಅಥವಾ ಸಾಮೂಹಿಕವಾಗಲಿ ನಮ್ಮಲ್ಲಿರುವ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೇ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.