ಹೊಸಪೇಟೆ: ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಸರ್ಕಾರದ ಅಕ್ಷರ ದಾಸೋಹ ಮಧ್ಯಾಹ್ನ ಬಿಸಿಯೂಟ ಯೋಜನೆಯ ಹಾಗೂ ಅಜಿಮ್ ಪ್ರೇಮ್ ಜಿ ಫೌಂಡೇಶನ್ ಇವರ ಸಹಯೋಗದಲ್ಲಿ ನಗರದ ಪುಣ್ಯಮೂರ್ತಿ ರಾಘಪ್ಪಶೆಟ್ಟಿ ಸರ್ಕಾರಿ ಶಾಲೆಯಲ್ಲಿ ಬುಧವಾರ ಶಾಸಕ ಎಚ್.ಆರ್.ಗವಿಯಪ್ಪ ಮಕ್ಕಳಿಗೆ ಮೊಟ್ಟೆ ತಿನ್ನಿಸುವುದರ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿ, ಅಜಿಮ್ ಪ್ರೇಮ್ ಜಿ ಫೌಂಡೇಶನ್‌ನಿAದ 1591 ಕೋಟಿ ರೂ. ವೆಚ್ಚದಲ್ಲಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ನೀಡಲಾಗುತ್ತದೆ. ಶಾಲಾ ಮಕ್ಕಳಲ್ಲಿ ನ್ಯೂನ ಪೋಷಣೆಯನ್ನು ತಡೆಗಟ್ಟಿ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ಮೂರು ವರ್ಷಗಳಿಗೆ ಕಾರ್ಯಕ್ರಮ ನಡೆಯಲಿದೆ ಎಂದರು. ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳವರೆಗೆ ಮೊಟ್ಟೆ ವಿತರಣೆ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದೆ. ಇದರಿಂದ ಮಕ್ಕಳ ಪೌಷ್ಟಿಕತೆ ವೃದ್ಧಿಗೆ ತುಂಬಾ ಸಹಕಾರಿಯಾಗಲಿದೆ. ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದರು.