ಜಿಲ್ಲೆ

ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ

ಮಂಜುನಾಥ

ಹೊಸಪೇಟೆ: ಮಕ್ಕಳ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಗಳು ಸಹಕಾರಿಯಾಗಲಿವೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಪಿ.ಮಂಜುನಾಥ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಖಾಸಗಿ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ನೂತನ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದಿಂದ ಮಕ್ಕಳಲ್ಲಿ ಶಿಸ್ತು, ಕೌಶಲ್ಯ, ಜ್ಞಾನ ವೃದ್ಧಿಯ ಜತೆಗೆ ಸ್ವಾವಲಂಬನೆಯಿAದ ಬದುಕುವ ಆತ್ಮ ಸ್ಥೈರ್ಯ ಹೆಚ್ಚಾಗಲಿದೆ. ಶಾಲಾ ಹಂತದಲ್ಲಿ ಮಕ್ಕಳನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸುತ್ತದೆ. ಘಟಕದಿಂದ ವಿಶೇಷ ತರಬೇತಿಗಳಲ್ಲಿ ಅಪಾಯದಲ್ಲಿ ಗಾಯಗೊಂಡ ವ್ಯಕ್ತಿಗಳಿಗೆ ಹೇಗೆ ಪ್ರಥಮ ಚಿಕಿತ್ಸೆ ನೀಡಬೇಕು ಎಂಬುದನ್ನು ಕಲಿಸುತ್ತದೆ. ಮಕ್ಕಳಲ್ಲಿ ಸೇವಾ ಮನೋಭಾವನೆ ಬೆಳೆಸುತ್ತದೆ ಎಂದರು.

ಸ್ಕೌಟ್ಸ್ ಮತ್ತು ಗೌಡ್ಸ್ ಜಿಲ್ಲಾ ಸಂಘಟಕ ಜಿ.ಬಿ.ಸಿ. ಪಾಟೀಲ್, ಸ್ಕೌಟ್ಸ್ ಮಾಸ್ಟರ್ ಶ್ರೀನಿವಾಸ್ ಜಿ.ಜೋಷಿ, ಗೈಡ್ಸ್ ಕ್ಯಾಪ್ಟನ್ ಕನಕಲಕ್ಷ್ಮೀ, ಜಿಲ್ಲಾ ಅಭಿವೃದ್ದಿ ಸಂಘಟಕ ಎನ್.ಐ.ಸಾಂಗ್ಲಿ ಇತರರಿದ್ದರು.