ಹೊಸಪೇಟೆ: ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ ಬಿಜಲಿ ಯೋಜನೆಯ ಅಡಿಯಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಮಾನದಂಡ ವೆಚ್ಚದ ಶೇ.60 ರಷ್ಟು ಸಹಾಯಧನ ಒದಗಿಸಲಾಗುವುದು.
ಸೋಲಾರ್ ರೂಫ್ ಟಾಪ್ ಸಿಸ್ಟಮ್ಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇದಾಗಿದ್ದು, ಒಂದು ಕಿಲೋವ್ಯಾಟ್ಗೆ 30 ಸಾವಿರ ರೂ., 2 ಕಿಲೋವ್ಯಾಟ್ಗೆ ರೂ.60 ಸಾವಿರ ರೂ., 3 ಕಿಲೋವ್ಯಾಟ್ಗೆ 78 ಸಾವಿರ ರೂಪಾಯಿಗಳ ಸಹಾಯಧನ ನೀಡಲಾವುದು.
ಅರ್ಜಿ ಸಲ್ಲಿಸಲು ವೆಬ್ ಲಿಂಕ್ ಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 1912 ಗೆ ಕರೆಮಾಡಿ ಅಥವಾ ಹತ್ತಿರದ ಜೆಸ್ಕಾಂ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಜೆಸ್ಕಾಂ ನ ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.