ಹೊಸಪೇಟೆ: ನಗರ ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತು ವಿಲೇವಾರಿ ಕುರಿತಂತೆ ರಾಷ್ಟಿçÃಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳು, ಪರಿಸರ ಇಲಾಖೆ ಮತ್ತು ಜಿಲ್ಲಾ ವಾಯುಮಾಲಿನ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ರಾಷ್ಟಿçÃಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ ಪಾಲನೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ನ್ಯಾಯಾಧೀಕರಣಕ್ಕೆ ಸಲ್ಲಿಸಿರುವ ಅಫಿಡೇವಿಟ್‌ನಲ್ಲಿನ ಅಂಶಗಳನ್ನು ನಿಗದಿತ ಸಮಯದೊಳಗೆ ಕಾರ್ಯಗತಗೊಳಿಸಬೇಕು. ನಿರ್ಲಕ್ಷ್ಯಯತನ ತೋರಿದಲ್ಲಿ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಇಂಜಜಿನಿಯರ್‌ಗಳಾದ ನಾಗರಾಜ, ವೀರೇಶ್, ಶಿಲ್ಪಾಶ್ರೀ, ಜಗದೀಶ್ ಇತರರಿದ್ದರು.