ಜಿಲ್ಲೆ

ರಾಜ್ಯಮಟ್ಟದ ಪ್ರಶಸ್ತಿಗೆ ಹಾಲ್ಯಾನಾಯ್ಕ ಭಾಜನ

ಮಂಜುನಾಥ

ಹೊಸಪೇಟೆ: ಬೆಂಗಳೂರಿನ ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿನಿಂದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಕೊಡುವ ಗುರುಭೂಷಣ ರಾಜ್ಯಮಟ್ಟದ ಪ್ರಶಸ್ತಿಗೆ ತಾಲೂಕಿನ ಕಮಲಾಪುರದ ಸಿದ್ದೇಶ್ವರಸ್ವಾಮಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಎಲ್.ಹಾಲ್ಯಾನಾಯ್ಕ ಭಾಜನರಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಹಾಗೂ ಶಾಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆಯನ್ನು ಗುರುತಿಸಿ 2024-25ನೇ ಸಾಲಿನ ಗುರುಭೂಷಣ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳುರಿನಲ್ಲಿ ಅ.15 ಮತ್ತು 16ರಂದು ನಡೆಯಲಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅಕಾಡೆಮಿ ಸಂಸ್ಥಾಪಕ ಸೋಮೇಶ್ ನವೋದಯ ತಿಳಿಸಿದ್ದಾರೆ.