ಜಿಲ್ಲೆ

ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮಂಜುನಾಥ

ಹೊಸಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸಾಲಿನ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾದೆ.

ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ. https://ssp.postmatric.karnataka.gov.in ವೆಬ್‌ಲೈಟ್ ಮೂಲಕ ಅರ್ಜಿ ಸಲ್ಲಿಸಬಹುದು. https://bcwd.karnataka.gov.in ವೆಬ್‌ಸೈಟ್ ಗೆ ಭೇಟಿ ಮಾಹಿತಿ ಪಡೆಯಬಹದು, ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂ.ಸಂ: 8050770005, ಇ-ಮೇಲ್ bcwdhelpline@gmail.com, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ದೂ. ಸಂ: 1902 ಅಥವಾ ಇ-ಮೇಲ್ postmatrichelp@karnataka.gov.in ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.