ಹೊಸಪೇಟೆ: ಈ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲ್ಲಿನ ತಾಲೂಕಿನ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಇಲಾಖಾ ವೆಬ್ ಸೈಟ್ ಮೂಲಕ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.31ರ ವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9480843076 ಸಂಖ್ಯೆಗೆಕಚೇರಿ ಸಮಯದಲ್ಲಿ ಕರೆ ಮಾಡಿ ಸಂಪರ್ಕಿಸ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.