ಹೊಸಪೇಟೆ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನ ನೀಡಲು ಅರ್ಹ ವಿಕಲಚೇತನದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕೇಂದ್ರ ಸರ್ಕಾರದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆಗಸ್ಟ್ 31 ಹಾಗೂ ಮತ್ತು ನಂತರ ಮತ್ತು ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕಾಗಿ ಅ.31ರೊಳಗಾಗಿ https://scholarships.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನಕ್ಕಾಗಿ ಮೆಟ್ರಿಕ್ ನಂತರ ಹಾಗೂ ಮೆಟ್ರಿಕ್ ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯ ತಾಲೂಲು ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು.