ಜಿಲ್ಲೆ

ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಮಂಜುನಾಥ

ಹೊಸಪೇಟೆ: ಈ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವಿದ್ಯಾರ್ಥಿಗಳಿಗೆ ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಸಕ್ತ ವಿದ್ಯಾರ್ಥಿಗಳು ಆನ್‌ಲೈನ್ https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಸೆ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್‌ನ್ನು ವೀಕ್ಷಣೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ bcwdhelpine@gmail.com ಅಥವಾ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಇ-ಮೇಲ್ postmatrichelp@karnataka.gov.in ಮತ್ತು ಸಹಾಯವಾಣಿ ಸಂಖ್ಯೆ 1902 ಸಂಪರ್ಕಿಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಶಶಿಕಲಾ ತಿಳಿಸಿದ್ದಾರೆ.