ಜಿಲ್ಲೆ

ಸೂರ್ಯಕಾಂತಿ ಉತ್ಪನ್ನ ಖರೀದಿ ಪ್ರಕ್ರಿಯೆ ಆರಂಭ

ಮಂಜುನಾಥ

ಹೊಸಪೇಟೆ: ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಈ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸುವ ಪ್ರಕ್ರಿಯೆ ನಡೆಯುತ್ತಿದೆ.

ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ 7280 ರೂ. ನಂತೆ ರೈತರಿಂದ ಖರೀದಿಗಾಗಿ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧೆಡೆ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ರಾಜ್ಯ ಸರ್ಕಾರದಿಂದ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿಯಿAದ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುತ್ತಿದೆ. ರೈತರು ತಮ್ಮ ಹೆಸರನ್ನು ಆ.24ರಿಂದ ಅನ್ವಯವಾಗುವಂತೆ 45 ದಿನಗಳೊಳಗೆ ನೋಂದಣಿ ಮಾಡಿಸಬೇಕು. ಎಕರೆಗೆ 03 (ಮೂರು) ಕ್ವಿಂಟಾಲ್s ಗರಿಷ್ಠ 15 (ಹದಿನೈದು) ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಸೂರ್ಯಕಾಂತಿ ಉತ್ಪನ್ನವನ್ನು ಆ.24ರಿಂದ ಅನ್ವಯವಾಗುವಂತೆ ಸರ್ಕಾರಿ ರಜೆ ದಿನ ಹೊರತುಪಡಿಸಿ 90 ದಿನಗಳವರೆಗೆ ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆವರೆಗೆ ಮಾತ್ರ ಖರೀದಿಸಲಾಗುವುದು. ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಸದುಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಎಣ್ಣೇ ಬೀಜ ಬೆಳೆಗಾರರ ಸಹಕಾರ ಸಂಘಕ್ಕೆ ಭೇಟಿ ನೀಡಬಹುದು.