ಜಿಲ್ಲೆ

ಅಕ್ಷರದಿಂದ ಅನ್ನ ಹುಡುಕುವ ಕೆಲಸ ಆಗಲಿ

ಮಂಜುನಾಥ

ಹೊಸಪೇಟೆ: ಇತ್ತೀಚಿನ ದಿನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಕೂಡ ಕೂಲಿ ಕಾರ್ಮಿಕರು ಉದ್ಯೋಗಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಹಳ್ಳಿಗರು ನಗರಕ್ಕೆ ಗೂಳೆ ಬರುತ್ತಿರುವುದು ನೋವಿನ ಸಂಗತಿಯಾಗಿದೆ. ಪ್ರಸ್ತುತ ದಿನಗಳಲ್ಲಿ ಜೀವನಕ್ಕೆ ಎರಡು ಕೆಲಸಗಳನ್ನು ಮಾಡುವ ಅಗತ್ಯವಿದ್ದು. ಸಮತೋಲನದ ಜೀವನ ನಡೆಸಬೇಕು ಎಂದು ಗುಡಗೇರಿ ಸರ್ಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಭೀಮೇಶ ಯರಡೋಣಿ ಅಭಿಪ್ರಾಯಪಟ್ಟರು.

ಕನ್ನಡ ವಿವಿಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಿಂದ ಪಂಪ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 21 ದಿನಗಳ ಯುಜಿಸಿ ನೆಟ್ ಮತ್ತು ಕೆ-ಸೆಟ್ ತರಬೇತಿ ಕಾರ್ಯಗಾರದ ಸಮಾರೋಪದಲ್ಲಿ ಮಾತನಾಡಿದರು. ಅನ್ನದಿಂದ ಅಕ್ಷರ, ಅಕ್ಷರದಿಂದ ಅನ್ನವನ್ನು ಹುಡುಕುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಯಶಸ್ಸು ಕಾಣಬೇಕು ಎಂದರು.

ಯಲ್ಲಾಪುರ ಸರ್ಕಾರಿ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರವಿ ಶೇಷಗಿರಿ ಮಾತನಾಡಿ, ಅಧಿಕಾರ, ಅಂತಸ್ತುಗಳಿAದ ವಂಚಿತರಾದರು. ಅಕ್ಷರಗಳನ್ನು ಹುಡುಕಿಕೊಂಡು ಜೀವನದಲ್ಲಿ ಯಶಸ್ಸು ಕಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವಕಾಶಗಳು ತುಂಬು ಇದ್ದು, ಬದುಕಿನ ಮಾರ್ಗಗಳನ್ನು ನಾವೇ ಗುರುತಿಸಿಕೊಂಡು ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುಬೇಕು ಎಂದರು.

ಭಾಷಾ ನಿಕಾಯದ ಡೀನ್ ಡಾ.ಎಫ್.ಟಿ.ಹಳ್ಳಿಕೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಪರ್ಧಾತ್ಮಕ ಪೈಪೋಟಿಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ, ಪರಿಶ್ರಮ ಹಾಗೂ ಶ್ರದ್ಧೆ ಸೂಕ್ತ ರೀತಿಯಲ್ಲಿ ಅಭ್ಯಾಸ ಮಾಡಬೇಕು. ಮುಖ್ಯವಾಗಿ ಕನ್ನಡ ವಿವಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ತರಬೇತಿ ಕಾರ್ಯಾಗಾರದ ಸಂಚಾಲಕ ಡಾ.ವೆಂಕಟಗಿರಿ ದಳವಾಯಿ, ಪ್ರಾಧ್ಯಾಪಕರಾದ ಡಾ.ಎಫ್.ಟಿ.ಹಳ್ಳಿಕೇರಿ, ಡಾ.ರವಿ ಶೇಷಗಿರಿ, ಡಾ.ಅಮರೇಶ ಯತಗಲ್ ಇತರರಿದ್ದರು.