ಹೊಸಪೇಟೆ: ಇಂದಿನ ಯುವಜನಾಂಗಕ್ಕೆ ಕನ್ನಡ ಭಾಷೆಯ ಅಂತಃಸತ್ವದ ಪರಿಚಯವಾಗಬೇಕು. ಸರ್ಕಾರ ಮತ್ತು ಸಮಾಜ ವರ್ತಮಾನದಲ್ಲಿ ಕನ್ನಡ ಭಾಷೆಯ ಸಮಸ್ಯೆ-ಸವಾಲುಗಳನ್ನು ಅರಿತುಕೊಂಡು ಕನ್ನಡವನ್ನು ಕಟ್ಟುವ ಕಾರ್ಯದಲ್ಲಿ ನಿರತವಾಗಬೇಕು ಎಂದು ಕನ್ನಡ ವಿವಿ ಕುಲಸಚಿವ ಪ್ರೊ.ವಿಜಯ ಪೂಣಚ್ಚ ತಂಬಂಡ ಅಭಿಪ್ರಾಯಪಟ್ಟರು.
ಕನ್ನಡ ವಿವಿ ಮಂಟಪ ಸಭಾಂಗಣದಲ್ಲಿ ಶನಿವಾರ ಮೈಕೊ ಕನ್ನಡ ಬಳಗ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರೋತ್ಸಾಹಧನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಮಾಧ್ಯಮದ ಬಡ ವಿದ್ಯಾರ್ಥಿಗಳಿಗೆ ನೆರವು ನೀಡುವ ಮೂಲಕ ಕನ್ನಡವನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯದಲ್ಲಿ ನಿರತವಾಗಿದೆ. ಹೀಗೆ ಮೈಕೋ ಕನ್ನಡ ಬಳಗ ಸಂಸ್ಥೆಯು ಇನ್ನೂ ಹೆಚ್ಚಾಗಿ ಬೆಳೆಯಬೇಕು. ಕನ್ನಡ ವಿದ್ಯಾರ್ಥಿಗಳನ್ನು ಬೆಳೆಸಬೇಕು ಎಂದರು.
ಮೈಕೋ ಕನ್ನಡ ಬಳಗದ ಅಧ್ಯಕ್ಷ ಕೆ.ಎಸ್.ರಾಮತೀರ್ಥ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡಕ್ಕಾಗಿ ಇರುವ ಏಕೈಕ ವಿವಿ ಅದು ಕನ್ನಡ ವಿವಿ. ಈ ವಿವಿ ಉತ್ತಮವಾಗಿ ನಡೆದುಕೊಂಡು ಸಾಗುತ್ತಿದೆ. ಇಲ್ಲಿರುವ ವಿದ್ಯಾರ್ಥಿಗಳ ಬೆಳೆದರೆ ಕನ್ನಡ ಬೆಳೆಯುತ್ತದೆ. ಈ ವಿಶ್ವವಿದ್ಯಾಲಯ ಬೆಳಯಬೇಕೆಂಬುದು ಮೈಕೊ ಕನ್ನಡ ಬಳಗದ ಆಶಯ. ಕನ್ನಡವನ್ನು ಉಳಿಸಿ, ಬೆಳೆಸಿ. ಕನ್ನಡ ಬೆಳೆಸಬೇಕಾದರೆ ವಿದ್ಯಾರ್ಥಿಗಳು ಬೆಳೆಯಬೇಕು ಎಂದು ತಿಳಿಸಿದರು.
12 ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ವಿತರಿಸಲಾಯಿತು. ಮೈಕೋ ಕನ್ನಡ ಬಳಗದ ಸಹ ಕಾರ್ಯದರ್ಶಿ ಗುರುಪ್ರಸಾದ್, ಮೈಕೊ ಕನ್ನಡ ಬಳಗದ ಪ್ರಧಾನ ಕಾರ್ಯದರ್ಶಿ ಕೆ.ಬಸವರಾಜು, ಶೈಕ್ಷಣಕ ವಿಭಾಗದ ನಿರ್ದೇಶಕ ಪ್ರೊ.ಎಸ್.ವೈ.ಸೋಮಶೇಖರ್, ಅಧ್ಯಯನಂಗದ ನಿರ್ದೇಶಕ ಡಾ.ಅಮರೇಶ ಯತಗಲ್, ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಶೈಲಜ ಇಂ.ಹಿರೇಮಠ, ಅಭಿವೃದ್ಧಿ ಅಧಯನ ವಿಭಾಗದ ಪ್ರೊ.ಜನಾರ್ಧನ ಇತರರಿದ್ದರು.