ಜಿಲ್ಲೆ

ಪ್ರಜಾಪ್ರಭುತ್ವಕ್ಕೆ ರಾಮಾಯಣ ಮನೋಧರ್ಮ

ಮಂಜುನಾಥ

ಹೊಸಪೇಟೆ: ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಎಲ್ಲರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ನಗರದ ಚಿತ್ತವಾಡಗಿಯ ಬನಶಂಕರಿ ದೇಗುಲದಲ್ಲಿ ಭಾನುವಾರ ವಾಲ್ಮೀಕಿ ಜಯಂತಿ ಮಹೋತ್ಸವದ ಅಂಗವಾಗಿ ನಡೆದ ಭಾವಚಿತ್ರದ ಮೆರವಣಿಗೆ ಉದ್ಘಾಟಿಸಿ ಮಾತನಾಡಿದರು.

ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು. ರಾಮಾಯಣ ಎಂಬ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ. ಭ್ರಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ, ಪ್ರಜಾಪ್ರಭುತ್ವ ರಾಮಾಯಣ ಮಹಾಕಾವ್ಯವು ಪರಿಚಯಿಸಿದೆ. ಮಹರ್ಷಿ ವಾಲ್ಮೀಕಿಯವರು ರಾಮಾಯಣ ರಚಿಸಿದ್ದರಿಂದ ವಾಲ್ಮೀಕಿ ರಾಮಾಯಣ ಎಂದು ಪ್ರಸಿದ್ದಿಯಾಯಿತು ಎಂದರು.

ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಾರ್ಯಕ್ರಮ ಉದ್ಘಟಿಸಿ ಮಾತನಾಡಿ, ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡದಾದ ಕಾವ್ಯವನ್ನು ಕೊಡುಗೆ ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ತತ್ವಾದರ್ಶ ಕೊಡುಗೆ ಅಪಾರವಾಗಿದ್ದು, ಅವರು ನೀಡಿರುವ ಆದರ್ಶ ವಿಚಾರ-ತತ್ವಾದಾರ್ಶಗಳು ನಮ್ಮ ದೇಶ ಮಾತ್ರವಲ್ಲದೇ ವಿದೇಶಗಳಲ್ಲಿ ಪ್ರಚಲಿತದಲ್ಲಿವೆ.  ಅವರ ತತ್ವಗಳನ್ನು ಜೀವನದಲ್ಲಿ ಪಾಲನೆ ಮಾಡಬೇಕು ಎಂದರು.

ಬನಶಂಕರಿ ದೇಗುಲದಿಂದ ಶಾದಿ ಮಹಲ್, ಹೊಸೂರ ರಸ್ತೆ ಮಾರ್ಗವಾಗಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ನಡೆಯಿತು. ವಾಲ್ಮೀಕಿ ಸಮಾಜದ ಧರ್ಮದರ್ಶಿ ಜಂಬಯ್ಯ ನಾಯಕ, ವಾಲ್ಮೀಕಿ ಸಮಾಜದ ಅಧ್ಯಕ್ಷ ಶ್ರೀನಾಥ್ ಗುಜ್ಜಲ್,  ಪ್ರಮುಖರಾದ ವಸಂತ ಜಂಬಾನಹಳ್ಳಿ, ಮಂಜುನಾಥ್, ಅಂಜಿನಪ್ಪ,  ಕೊಟ್ರೇಶ್, ಹನುಮಂತಪ್ಪ ಇತರರಿದ್ದರು.