ಜಿಲ್ಲೆ

ವಾಲ್ಮೀಕಿ ಜಯಂತಿ ಅಚ್ಚುಕಟ್ಟಾಗಿ ನಡೆಯಲಿ

ಮಂಜುನಾಥ

ಹೊಸಪೇಟೆ: ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂ ಹಾಲನಲ್ಲಿ ಸೋಮವಾರ ನಡೆದ ಜಯಂತ್ಯುತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಯಂತಿ ಹಿನ್ನೆಲೆಯಲ್ಲಿ ಸರ್ಕಾರದ ಆದೇಶಗಳ ಪ್ರಕಾರ ಶಿಷ್ಟಾಚಾರ ಪಾಲಿಸಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಣೆ ಮಾಡಬೇಕು. ನಗರದ ಮಹರ್ಷಿ ವಾಲ್ಮೀಕಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಶ್ರೀವೀರ ಮದಕರಿ ನಾಯಕ ವೃತ್ತ ಸೇರಿದಂತೆ ವಿವಿಧ ಕಡೆಗಳಲ್ಲಿ ದೀಪಾಲಂಕಾರ ಮಾಡಬೇಕು. ಸರ್ಕಲ್‌ಗಳ ಸುತ್ತಲು ಸ್ವಚ್ಛತೆ ಕಾಪಾಡಲು, ಕಾರ್ಯಕ್ರಮದ ಆವರಣದಲ್ಲಿ ಶುಚಿತ್ವ ಕಾರ್ಯ ನಡೆಸಲು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.

ಜಯಂತಿ ನಿಮಿತ್ತ ಸರ್ಕಾರಿ ಅರೇ ಸರ್ಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳು ಹಾಗು ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ವೇದಿಕೆಯ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿಯವರ ಜೀವನ ಚರಿತ್ರೆಯ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಾಡು ಮಾಡಬೇಕು. ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಎಸ್ಪಿ ಬಿ.ಎಲ್.ಶ್ರೀಹರಿ ಬಾಬು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಶಾಶುಮೋದ್ದೀನ್, ಪಿಡಿ ಮನೋಹರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ಬಿ.ರಾಮಚಂದ್ರಪ್ಪ, ಪ್ರಮುಖರಾದ ಗುಜ್ಜಲ್ ಶ್ರೀನಾಥ, ಗುಜ್ಜಲ ಗಣೇಶ, ಗೋಸಲ ಭರಮಪ್ಪ, ಜೆ.ವಸಂತಕುಮಾರ, ಚಂದ್ರಶೇಖರ, ಪಿ.ವೆಂಕಟೇಶ, ಗುಜ್ಜಲ ಚಂದ್ರಶೇಖರ, ನಿಶಾನಿ ಕನಿಮಪ್ಪ, ಸೋಮಪ್ಪ, ಶ್ರೀಕಂಠ, ಕಟಗಿ ಜಂಬಯ್ಯ, ಗುಡಗುಂಟಿ ಮಲ್ಲಿಕಾರ್ಜುನ, ಜಗದೀಶ ಕಮತಗಿ ಇತರರಿದ್ದರು.