ಹೊಸಪೇಟೆ: ಯುವಜನತೆಯನ್ನು ಪ್ರೋತ್ಸಾಹಿಸಲು ಯುವನಿಧಿ ಯೋಜನೆಯ ಮೂಲಕ ವಿವಿಧ ಕೌಶಲ್ಯಾಧರಿತ ತರಬೇತಿಗಳನ್ನು ನೀಡುವ ಮೂಲಕ ಸ್ವಾವಲಂಬಿ ಬದುಕು ನೀಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಕುರಿ ಶಿವಮೂರ್ತಿ ಹೇಳಿದರು.
ಜಿಲ್ಲಾಡಳಿತ, ಜಿ.ಪಂ. ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ನಗರದ ಟಿಎಂಎಇಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗುರುವಾರ ಯುವನಿಧಿ ಮತ್ತು ಯುವನಿಧಿ ಪ್ಲಸ್ ಯೋಜನೆ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಯುವಕ, ಯುವತಿಯರು ಸದುಪಯೋಗ ಪಡಿಸಿಕೊಳ್ಳಬೇಕಿದೆ. ಯುವನಿಧಿ ಯೋಜನೆಯಡಿಯಲ್ಲಿ ಯುವ ಜನತೆಗೆ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಯುವನಿಧಿ ಪ್ಲಸ್ ಯೋಜನೆ ಜಾರಿ ಮಾಡಿದೆ. ಈಗಾಗಲೇ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 8007 ಫಲಾನುಭವಿಗಳು ನೊಂದಾಣಿಯಾಗಿದ್ದಾರೆ. ಪ್ರಸ್ತುತ 109 ಅಭ್ಯರ್ಥಿಗಳು ಸರ್ಕಾರಿ ಸಂಸ್ಥೆಗಳಿAದ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ. ಹಂತ ಹಂತವಾಗಿ ಎಲ್ಲಾ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ನೀಡಲಾಗುವುದು ಎಂದರು.
ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಮಾತನಾಡಿ, ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಹೆಚ್ಚು ಆಸಕ್ತಿ ವಹಿಸಬೇಕಿದೆ. ಯುವಜನತೆಗೆ ಆಸಕ್ತಿದಾಯಕ ತರಬೇತಿಗಳನ್ನು ನೀಡಲು. ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ವಹಿಸಲಾಗಿದೆ. ನಿರೀಕ್ಷೆಗೆ ಮೀರಿ ಯುವಕರಿಂದ ನೋಂದಾಣಿಗಳಾದಲ್ಲಿ ತರಬೇತಿ ಕೇಂದ್ರಗಳು ಮತ್ತು ಸಂಸ್ಥೆಗಳನ್ನು ವಿಸ್ತರಿಸಲಾಗುವುದು. ನಿರುದ್ಯೋಗ ವಿದ್ಯಾವಂತ ಯುವಕ ಮತ್ತು ಯುವತಿಯರಿಗೆ ಕೌಶಲ್ಯಾಧರಿತ ತರಬೇತಿಗಳ ಅಗತ್ಯವಿದೆ. ಜತೆಗೆ ಯುವನಿಧಿ ಫಲಾನುಭವಿಗಳು ಸಹ ಕಡ್ಡಾಯವಾಗಿ ಸರ್ಕಾರದ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವೆಬ್‌ಸೈಟ್ ಮೂಲಕ ನೊಂದಾಯಿಸಿಕೊಳ್ಳಬೇಕಿದೆ ಎಂದರು.
ಜಿಲ್ಲಾ ಉಪಾಧ್ಯಕ್ಷ ಎಚ್.ಜಂದಿಸಾಹೇಬ್, ಸದಸ್ಯ ಪಿ.ಎಚ್.ದೇವರಾಜ್, ಕಾಲೇಜಿನ ಪ್ರಾಂಶುಪಾಲ ಎಚ್.ಶಂಕರಾನAದ, ಉಪಪ್ರಾಚಾರ್ಯ ಟಿ.ನಜರುದ್ಧೀನ್, ಟಿಎಂಎಇಎಸ್ ಪಾಲಿಟೆಕ್ನಿಕ್ ಐಟಿಐ ಕಾಲೇಜಿನ ಪ್ರಾಂಶುಪಾಲ ರೇವಣಸಿದ್ದಪ್ಪ ಇದ್ದರು.