ಹನಗೋಡು : ಹುಣಸೂರು ನಗರದ ಜೆಎಲ್‌ಬಿ ರಸ್ತೆ ಬಳಿ ನೂತನವಾಗಿ ನಿರ್ಮಿಸಿರುವ ಶ್ರೀ ಕೃಷ್ಣ ಆಸ್ಪತ್ರೆಯನ್ನು ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಸೋಮವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಗ್ರಾಮೀಣ ಪ್ರದೇಶದಿಂದ ಬರುವ ಬಡ ರೋಗಿಗಳ ಆರೋಗ್ಯ ಪಾಲನೆಗೂ ಕಾಳಜಿ ವಹಿಸಿ ಎಂದರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರೋಗ್ಯ ವಿಮಾ ಸೌಲಭ್ಯಗಳನ್ನು ಅಳವಡಿಸಿಕೊಂಡು ರೋಗಿಗಳಿಗೆ ಗುಣ ಮಟ್ಟದ ಸೇವೆ ನೀಡುವ ವ್ಯವಸ್ಥೆ ಮಾಡಿ ಎಂದು ಸಲಹೆ ನೀಡಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಭರತ್ ಕುಮಾರ್ ಮಾತನಾಡಿ, ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ ಲಭ್ಯವಿದೆ. ವಿಶೇಷವಾಗಿ ಎಲ್ಲ ರೀತಿಯ ಕಾಯಿಲೆಗಳಿಗೂ ತಪಾಸಣೆ, ಸುಸಜ್ಜಿತ ಲ್ಯಾಬ್ ಸೌಲಭ್ಯವಿದೆ ಇದೆ ಎಂದರು. ಪ್ರತಿ ದಿನವೂ ಒಬ್ಬರು ವಿಶೇಷ ತಜ್ಞ ವೈದ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಅವರು ರೋಗಿಗಳ ಬಗ್ಗೆ ಕಾಳಜಿ ವಹಿಸಲಿದ್ದಾರೆ ಎಂದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಅಮರನಾಥ್, ಜಿಪಂ ಮಾಜಿ ಸದಸ್ಯರಾದ ಕುನ್ನೆಗೌಡ, ತಾಲೂಕು ಗ್ಯಾರಂಟಿ ಯೋಜನೆ ಸಮಿತಿಅಧ್ಯಕ್ಷ ಕಲ್ಕುಣಿಕೆ ರಾಘು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ನೇರಳಕುಪ್ಪೆ ಮಹದೇವ್, ಅಕ್ರಮ- ಸಕ್ರಮ ಸಮಿತಿ ಸದಸ್ಯ ಎಚ್. ಎಸ್. ಕುಮಾರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಎಚ್.ವೈ. ಕೃಷ್ಣ ಪ್ರಭಾಕರ್ ಮತ್ತು ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.