ರಾಯಚೂರಿನ ಮೆಟ್ರಿಕ್ ನಂತರ ವೃತ್ತಿಪರ ವಸತಿನಿಲಯದ ವಿದ್ಯಾರ್ಥಿಯರು ಮಂಗಳವಾರ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದರು. 
ಜಿಲ್ಲೆ

ನೀರಿಗಾಗಿ ವಸತಿ ನಿಲಯ ವಿದ್ಯಾರ್ಥಿನಿಯರ ಪ್ರತಿಭಟನೆ

ರಾಚಯ್ಯ ಸ್ವಾಮಿ

ರಾಯಚೂರು: ವಸತಿ ನಿಲಯಕ್ಕೆ ಸಮರ್ಪಕ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ನಗರದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ತಡ ರಾತ್ರಿ ಪ್ರತಿಭಟನೆ ನಡೆಸಿದರು.
ಕಳೆದ ಒಂದು ತಿಂಗಳಿಂದ ವಸತಿ ನಿಲಯದಲ್ಲಿ ನೀರಿನ ಸಮಸ್ಯೆ ಉಲ್ಭಣಿಸಿದೆ. ವಿದ್ಯಾರ್ಥಿಗಳು ಸ್ನಾನ ಸೇರಿದಂತೆ ಇನ್ನಿತರ ಕಾರ್ಯಗಳಿಗಾಗಿ ನೀರಿಗಾಗಿ ಪರದಾಡುವಂತಾಗಿದೆ. ಈ ಬಗ್ಗೆ ವಸತಿ ನಿಲಯ ಮೇಲ್ವಿಚಾರಕಿ ಗಮನಕ್ಕೆ ತಂದರೂ ಸಮಸ್ಯೆ ಇತ್ಯರ್ಥಗೊಂಡಿಲ್ಲ.
ಕೆಲವು ದಿನಗಳ ಹಿಂದೆ ಇಲಾಖೆ ಅಕಾರಿಗಳು ಭೇಟಿ ನೀಡಿ ಕೊಳವೆಬಾವಿ ಕೊರೆಸುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ಈ ಬಗ್ಗೆ ಕ್ರಮಕೈಗೊಂಡಿಲ್ಲ. ಟ್ಯಾಂಕರ್ ಮೂಲಕ ನೀರು ತಂದು ಹಾಕಲಾಗುತ್ತಿದ್ದು, ಇದರಿಂದ ನೀರಿನ ಕೊರತೆ ಉಂಟಾಗುವಂತಾಗಿದೆ.
ವಿದ್ಯಾರ್ಥಿನಿಯರಿಗೂ ಸಮರ್ಪಕ ಊಟದ ವ್ಯವಸ್ಥೆಯನ್ನು ಮಾಡುತ್ತಿಲ್ಲ. ಕೇಳಿದರೆ ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಲಾಗುತ್ತಿದೆ. ಕೂಡಲೇ ಸಂಬಂಸಿದ ಅಕಾರಿಗಳು ಕೊಳವೆಬಾವಿ ಕೊರೆಸಿ ನೀರಿನ ಸಮಸ್ಯೆ ನಿವಾರಿಸಬೇಕು ಎಂದು ವಿದ್ಯಾರ್ಥಿನಿಯರು ಒತ್ತಾಯಿಸಿದರು.