ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಮಳೆಗೆ ಗೋಡೆ ಕುಸಿದು ಬಿದ್ದಿರುವುದು 
ಜಿಲ್ಲೆ

ಹೊನ್ನೂರು ಗ್ರಾಮದಲ್ಲಿ ಮನೆ ಗೋಡೆ ಕುಸಿತ

ನಾಗೇಶ ಎಸ್

ಯಳಂದೂರು: ತಾಲೂಕಿನಲ್ಲಿ ಶನಿವಾರ ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ತಾಲೂಕಿನ ಹೊನ್ನೂರು ಗ್ರಾಮದ ಮಹದೇವ ಅವರ ಮನೆಯ ಗೋಡೆ ಕುಸಿದು ಬಿದಿದ್ದು, ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯಲ್ಲಿದ್ದ ಅಕ್ಕಿ, ರಾಗಿ, ಜೋಳ ಸೇರಿದಂತೆ ದಿನ ಬಳಕೆ ವಸ್ತುಗಳು ಮಣ್ಣು ಪಾಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕೆಂದು ಸಂತ್ರಸ್ತರು ಆಗ್ರಹಿಸಿದ್ದಾರೆ.