ಜಿಲ್ಲೆ

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಲೋಕೇಶ್ ಮನು. ಡಿ

ಕೊಳ್ಳೇಗಾಲ: ಪಟ್ಟಣದ ನಾಯಕರ ದೊಡ್ಡ ಬೀದಿಯಲ್ಲಿ ಶನಿವಾರ ಹೊಟ್ಟೆನೋವು ತಾಳಲಾರದೆ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಬಡಾವಣೆಯ ಮಲ್ಲೇಶ್ ಎಂಬುವರ ಪತ್ನಿ ಗೀತಾ(30)ಮೃತ ಗೃಹಿಣಿ. ಹಲವಾರು ತಿಂಗಳನಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಈಕೆ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.