ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನಲೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ತೇಜಸ್ವಿನಿ(28) ಎಂದು ಗುರುತಿಸಲಾಗಿದ್ದು, ಚಿಕ್ಕಬಳ್ಳಾಪುರದ ಕಾರ್ಖಾನ್ಪೇಟೆಯಲ್ಲಿ ಪತಿ ಲೋಹಿತ್ ಜೊತೆ ವಾಸವಿದ್ದರು.
ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಮೂಲದ ತೇಜಸ್ವಿನಿ 2022ರಲ್ಲಿ ಚಿಕ್ಕಬಳ್ಳಾಪುರದ ಲೋಹಿತ್ ಎಂಬುವವರನ್ನು ವಿವಾಹವಾಗಿದ್ದರು. ಮನೆಯಲ್ಲಿ ಯಾರು ಇಲ್ಲದೆ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ.