ಮೈಸೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಶನಿವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ನಗರದಲ್ಲಿ ಸಂಪೂರ್ಣ ವಿಫಲ ಗೊಂಡಿದ್ದು, ಬಂದ್ ಜನಜೀವನದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲಿಲ್ಲ.
ನಗರದಲ್ಲಿ ಜನ ಹಾಗೂ ವಾಹನ ಸಂಚಾರ ಎಂದಿನಂತೆ ಇತ್ತು. ಬಸ್, ಟ್ಯಾಕ್ಸಿ ಕಾರು, ಆಟೋ ಹಾಗೂ ಖಾಸಗಿ ವಾಹನಗಳ ಸಂಚಾರ ಬೆಳಗ್ಗಿನಿಂದಲೇ ಸುಗಮವಾಗಿ ಸಾಗಿತು. ನಗರದ ಪ್ರಮುಖ ಮಾರುಕಟ್ಟೆಗಳಾದ ದೇವರಾಜ, ವಾಣಿವಿಲಾಸ, ಮಂಡಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು. ಹೋಟೆಲ್, ಅಂಗಡಿ ಮುಂಗಟ್ಟು, ಪೆಟ್ರೋಲ್ ಬಂಕ್, ಸರ್ಕಾರಿ ಕಚೇರಿಗಳು, ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳು ಎಂದಿನಂತೆ ತೆರೆದಿತ್ತು.
ನಗರದ ಅಗ್ರಹಾರ ವೃತ್ತದಲ್ಲಿ ಕನ್ನಡಪರ ಕಾರ್ಯಕರ್ತರು ಕೆಲವು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದನ್ನು ಹೊರತು ಪಡಿಸಿದರೆ ನಗರದ ಉಳಿದ ಭಾಗದಲ್ಲಿ ಯಾವುದೇ ಅಡ್ಡಿ ಆತಂಕ ಇಲ್ಲದೆ ವ್ಯಾಪಾರ ವಹಿವಾಟು ನಡೆಯಿತು. ನಗರ ಬಸ್ ನಿಲ್ದಾಣಕ್ಕೆ ಮ್ತತ್ತಿಗೆ ಹಾಕಲು ಯತ್ನಿಸಿದ ಕೆಲವು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು.
ದೊರೆಯದ ಬೆಂಬಲ: