ಸಿಂದಗಿ: ಪಟ್ಟಣದ ಆರ್.ಡಿ.ಪಾಟೀಲ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಮಲಕಣ್ಣ ತಳವಾರ 589 ಅಂಕ ಪಡೆದು ರಾಜ್ಯಕ್ಕೆ 21ನೇ ರ್ಯಾಂಕ್ ಪಡೆದಿದ್ದಾರೆ.
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ಮಲಕಣ್ಣ ಅವರು ಇತಿಹಾಸ ಮತ್ತು ಶಿಕ್ಷಣ ಶಾಸ್ತ್ರದಲ್ಲಿ ನೂರಕ್ಕೆ ನೂರು ಅಂಕ ಪಡೆದಿದ್ದಾರೆ.
ಕಲಾ ವಿಭಾಗದ ವಿದ್ಯಾರ್ಥಿನಿ ಲಕ್ಷಿ$್ಮ ಹುಣಸಗಿ 576 ಅಂಕ, ವಾಣಿಜ್ಯ ವಿಭಾಗದ ಪ್ರಿಯಾಂಕಾ ವಾಲೀಕಾರ 574, ಕಾದಂಬರಿ ಕಾಮನಕೇರಿ 572, ಅಶ್ವಿನಿ ಭಾಸಗಿ 570 ಅಂಕ ಪಡೆದು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಚೇರ್ಮನ್ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.