ತಾಳಿಕೋಟೆ: ಗ್ಯಾರಂಟಿ ಯೋಜನೆಗಳ ನೆಪದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಜೇಬಿಗೆ ಕತ್ತರಿ ಹಾಕುತ್ತಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಮಾಜಿ ಅಧ್ಯ ಆರ್.ಎಸ್.ಪಾಟೀಲ (ಕೂಚಬಾಳ) ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಉಳಿಸಿಕೊಳ್ಳಲು ದಿನಬಳಕೆ ವಸ್ತುಗಳ ಬೆಲೆ ಹೆಚ್ಚಿಸುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಹಿಳೆಯರು, ಗುತ್ತಿಗೆದಾರರಿಗೆ ರಣೆ ಇಲ್ಲದಂತಾಗಿದೆ. ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ದೂರಿದರು.
ವಕ್ಫ್ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸುವುದಾಗಿ ಅವರು ಹೇಳಿದರು.