ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಕ್ರಮ ಖಂಡಿಸಿ ದೇವರಹಿಪ್ಪರಗಿ ತಾಲೂಕಿನ ಅಭಿಮಾನಿಗಳು ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. 
ಜಿಲ್ಲೆ

ಯತ್ನಾಳ ಅಭಿಮಾನಿಗಳಿಂದ ಪ್ರತಿಭಟನೆ

ದೇವರಹಿಪ್ಪರಗಿ: ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿಯಿಂದ ಉಚ್ಛಾಟಿಸಿದ ಕ್ರಮ ಖಂಡಿಸಿ ಯತ್ನಾಳ ಅಭಿಮಾನಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಯತ್ನಾಳರ ಅಭಿಮಾನಿಗಳು ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ&50ರಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಧಿಕ್ಕಾರ ಕೂಗುತ್ತ ಪ್ರತಿಭನಾ ಮೆರವಣಿಗೆ ನಡೆಸಿದರು.

ಬಿಜೆಪಿ ಧುರೀಣ ಬಸನಗೌಡ ಪಾಟೀಲ ಮಾತನಾಡಿ ಯತ್ನಾಳರನ್ನು ಪದಿಂದ ಹೊರಹಾಕುವ ಮೂಲಕ ಲಿಂಗಾಯತ ಪ್ರಮುಖ ನಾಯಕರನ್ನು ಮೂಲೆಗುಂಪು ಮಾಡುತ್ತಿದೆ ಎಂದರು.

ಕರ್ನಾಟಕ ರಣಾ ವೇದಿಕೆಯ ಮಡುಗೌಡ ಬಿರಾದಾರ ಹಾಗೂ ಪ್ರಮುಖರು ಪಾಲ್ಗೊಂಡಿದ್ದರು.